ರೈತ ಹೋರಾಟ | ಮಧ್ಯಪ್ರದೇಶದಲ್ಲಿ ಕರ್ನಾಟಕದ ರೈತರ ಬಂಧನ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Date:

ದೆಹಲಿ ಚಲೋ ಪ್ರತಿಭಟನೆ ಕರ್ನಾಟಕದಿಂದ ತೆರಳುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ರೈತರನ್ನು ಬಂಧಿಸಿರುವ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

- Advertisement -

ಫೆಬ್ರವರಿ 13ರಂದು ದೆಹಲಿ ಚಲೋಗೆ ರೈತ ಸಂಘಟನೆಗಳು ಕರೆಕೊಟ್ಟಿವೆ. ಆ ಪ್ರತಿಭಟನೆಯಲ್ಲಿ ಭಾಗಿಯಾಗಲು ಹುಬ್ಬಳ್ಳಿಯ ರೈತರು ಭಾನುವಾರ ರಾತ್ರಿ ದೆಹಲಿಗೆ ಹೊರಟ್ಟಿದ್ದರು. ಅವರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ರೈತರ ಹೋರಾಟವನ್ನು ಬಂಧನ ಮತ್ತು ಬೆದರಿಕೆಗಳ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಂಧಿತರಾಗಿರುವ ನಮ್ಮ ರಾಜ್ಯದ ಎಲ್ಲ ರೈತರನ್ನು ಮಧ್ಯಪ್ರದೇಶ ಸರ್ಕಾರ ತಕ್ಷಣವೇ ಬಿಡುಗಡೆ ಮಾಡಬೇಕು. ದೆಹಲಿಯಲ್ಲಿ (ಮಂಗಳವಾರ) ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅವರಿಗೆ ಅವಕಾಶ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

“ಮಧ್ಯಪ್ರದೇಶ ಸರ್ಕಾರವೇ ಬಂಧಿಸಿದ್ದರೂ, ಈ ಕ್ರಮದ ಹಿಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವಿದೆ. ರೈತರನ್ನು ಬಂಧಿಸಿ ಬೆದರಿಸುವ ಮೂಲಕ ಅವರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇಂತಹ ದಬ್ಬಾಳಿಕೆಯಿಂದ ರೈತರು ಇನ್ನಷ್ಟು ಬೀದಿ ಪಾಲಾಗಬಹುದು. ಕೇಂದ್ರಕ್ಕೆ ನಿಜವಾಗಿಯೂ ಶಾಂತಿ ಮತ್ತು ಸುವ್ಯವಸ್ಥೆಯ ಬಗ್ಗೆ ಕಾಳಜಿ ಇದ್ದರೆ, ರೈತರನ್ನು ದಬ್ಬಾಳಿಕೆ ಮತ್ತು ಕ್ರೂರವಾಗಿ ಮೌನವಾಗಿಸುವ ಬದಲು, ತಕ್ಷಣವೇ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆಯನ್ನು ಪರಿಹರಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 

“ಕೇಂದ್ರದಲ್ಲಾಗಲಿ, ರಾಜ್ಯಗಳಲ್ಲಾಗಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಅವರ ಮೊದಲ ಆಕ್ರಮಣ ರೈತರ ವಿರುದ್ಧ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿ.ಎಸ್‌ ಯುಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...