ರೈತ ಹೋರಾಟ | ಪೊಲೀಸರು ರಸ್ತೆಗೆ ಹಾಕಿದ್ದ ಸಿಮೆಂಟ್‌ ಬ್ಲಾಕ್‌ಗಳನ್ನು ನದಿಗೆ ಎಸೆದ ರೈತರು

Date:

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಫೆಬ್ರವರಿ 13ರಿಂದ ದೆಹಲಿ ಚಲೋಗೆ ಕರೆ ಕೊಟ್ಟಿದ್ದು, ಪಂಜಾಬ್ ರೈತರು ದೆಹಲಿಯತ್ತ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ರ್‍ಯಾಲಿ ಹೊರಟಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕಲು ಹರಿಯಾಣ ಪೊಲೀಸರು ಪಂಜಾಬ್-ಹರಿಯಣ ಗಡಿ ಅಂಬಾಲಾ ಬಳಿಯ ಹೆದ್ದಾರಿಯಲ್ಲಿ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದ್ದು, ಅವುಗಳನ್ನು ರೈತರು ಘಗ್ಗರ್‌ ನದಿಗೆ ಉರಿಳಿಸಿದ್ದಾರೆ. ದೆಹಲಿಯತ್ತ ಹೊರಟಿದ್ದಾರೆ.

- Advertisement -

ಫೆಬವರಿ 13ರ ಮಂಗಳವಾರ ಮುಂಜಾನೆ ಪಂಜಾಬ್ ರೈತರು ದೆಹಲಿಯತ್ತ ಹೊರಟ್ಟಿದ್ದರು. ಅವರನ್ನು ತಡೆಯಲು ಹರಿಯಾಣದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಅಂಬಾಲಾ ಬಳಿ ದೊಡ್ಡ ದೊಡ್ಡ ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದೆ. ಅವುಗಳನ್ನು ರೈತರೊಂದಿಗೆ ಸೇರಿದ ಸ್ಥಳೀಯ ಗ್ರಾಮಸ್ಥರು ನದಿಗೆ ಎದೆಸಿದ್ದಾರೆ. ಹರಿಯಾಣವನ್ನು ದಾಟಿ, ದೆಹಲಿ ಗಡಿಗೆ ಬರುವುದು ರೈತರಿಗೆ ಸವಾಲಾಗಿದೆ. ಆದರೂ, 2020ರಲ್ಲಿ ಸರ್ಕಾರದ ದಮನಕ್ಕೆ ಬಗ್ಗದೆ ದೆಹಲಿ ತಲುಪಿದ್ದ ರೈತರು, ಅದೇ ಉತ್ಸಾಹ ಮತ್ತು ಹೋರಾಟದ ಕಿಚ್ಚಿನೊಂದಿಗೆ ಮತ್ತೆ ದೆಹಲಿಯತ್ತ ಹೊರಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇನ್ನು, ದೆಹಲಿ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ಭಾನುವಾರದಿಂದಲೇ ದೆಹಲಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದಾರೆ. ದೆಹಲಿಯ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಕೆಲವು ಗಡಿ ಪ್ರದೇಶಗಳಲ್ಲಿ ರೈತರ ಟ್ರ್ಯಾಕ್ಟರ್‌ಗಳನ್ನು ತಡೆಯಲು ರಸ್ತೆಗಳ ಮೇಲೆ ದೊಡ್ಡ ಮೊಳೆಗಳನ್ನು ಹಾಕಿದ್ದಾರೆ.

 

2020ರಲ್ಲಿ ನಡೆದ ಒಂದು ವರ್ಷಗಳ ನಿರಂತರ ಹೋರಾಟಕ್ಕೆ ಮಣಿಸಿದ್ದ ಕೇಂದ್ರ ಸರ್ಕಾರ, ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿತ್ತು. ಜೊತೆಗೆ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಮತ್ತು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷ ಕಳೆದರೂ, ಭರವಸೆಗಳು ಭರವಸೆಯಾಗಿಯೇ ಉಳಿದಿವೆ.

ತನ್ನ ಭರವಸೆಗಳನ್ನು ಮರೆತಿರುವ ಸರ್ಕಾರಕ್ಕೆ ಆ ಭರವಸೆಗಳನ್ನು ನೆನಪಿಸಲು ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದಾರೆ. ಸುಮಾರು 200 ರೈತ ಸಂಘಟನೆಗಳು ಒಗ್ಗೂಡಿ ದೆಹಲಿಯತ್ತ ಹೊರಟಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...