ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

Date:

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಎಎನ್‌ಐ ಸುದ್ದಿ ಸಂಸ್ಥೆಯ ಜೊತೆಗೆ ಮಾತನಾಡುತ್ತಾ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರು ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಸನದಲ್ಲಿ ತಾವು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದ ಬಳಿಕ ಪೆನ್‌ಡ್ರೈವ್‌ ಅನ್ನು ಹಂಚಿದ್ದಾರೆ” ಎಂದು ಎಚ್‌ಡಿಕೆ ಗಂಭೀರ ಆರೋಪ ಮಾಡಿದ್ದಾರೆ.

“ಚುನಾವಣೆ ನಡೆಯುವ ಮೂರು ದಿನಕ್ಕೂ ಮುನ್ನ ನಮ್ಮ ವಿರೋಧಿ ಗುಂಪುಗಳ ಕೆಲವು ಜನರು, ವಿಶೇಷವಾಗಿ ಒಬ್ಬ ಬಿಜೆಪಿ ನಾಯಕ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ಸೇರಿಕೊಂಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಅವರ ಪ್ರಚಾರ ವಿಫಲವಾಗಿದೆ. ಆಂತರಿಕವಾಗಿ ಬೆನ್ನಿಗೆ ಚೂರಿ ಹಾಕಿದ ನಂತರವೂ ಅವರಿಗೆ ಯಶಸ್ಸು ಸಿಗದು ಎಂದು ಸಾಬೀತಾಗಿದೆ. ಹೀಗಾಗಿ ಪೆನ್‌ಡ್ರೈವ್ ಹರಿಬಿಡುವ ನಿರ್ಧಾರ ಮಾಡಿದರು” ಎಂದು ಎಚ್‌ಡಿಕೆ ದೂರಿದರು.

ಇದನ್ನು ಓದಿದ್ದೀರಾ?  ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

“ತಮಗೆ ಗೆಲುವು ಆಗಲ್ಲ ಎಂದು ತಿಳಿದ ಬಳಿಕ ಚುನಾವಣೆಗೂ ಮುನ್ನ ಪ್ರಜ್ವಲ್ ರೇವಣ್ಣ ಬಗ್ಗೆ ಕೆಲವು ಪೆನ್ ಡ್ರೈವ್ ಗಳನ್ನು ಹರಿಬಿಡಲು ಅವರು ನಿರ್ಧರಿಸಿದ್ದಾರೆ. ಆದರೆ ಅದು ನಕಲಿಯೋ ಅಸಲಿಯೋ ಗೊತ್ತಿಲ್ಲ” ಎಂದರು.

“ದೇವೇಗೌಡರು ಹಾಗೂ ನಮ್ಮ ಕುಟುಂಬದವರನ್ನು ನಿಂದಿಸುವ ಯತ್ನ ಮಾಡಿದ್ದಾರೆ. ನಮ್ಮ ಇಮೇಜ್ ಹಾಳು ಮಾಡುವ ಉದ್ದೇಶ ಹೊಂದಿದ್ದರು. ಅದಕ್ಕಾಗಿ ಸರ್ಕಾರದ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆ. ಇದರ ಹಿಂದೆ ಒಬ್ಬ ಸಚಿವ, ಅದರಲ್ಲೂ ಹಿರಿಯ ಸಚಿವರೊಬ್ಬರು ಇದ್ದಾರೆ. ಹಾಸನದ ಕೆಲವು ಬಿಜೆಪಿ ನಾಯಕರೂ ಇದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ‘ವಿಕೃತ ಕಾಮ ಪಿಶಾಚಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ’ ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

“ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಘೋಷಿಸಿದೆ. ಈಗ ಅದು ಸರ್ಕಾರ ಮತ್ತು ಎಸ್‌ಐಟಿಯ ಜವಾಬ್ದಾರಿ. ಪ್ರಜ್ವಲ್ ರೇವಣ್ಣ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ತಪ್ಪು ಮಾಡಿದ್ದರೆ ಕಾನೂನನ್ನು ಎದುರಿಸಬೇಕಾಗುತ್ತದೆ. ಕಾನೂನು ಬಾಹಿರವಾಗಿ ಏನಾದರೂ ಮಾಡಿದ್ದರೆ ಅದಕ್ಕೆ ಶಿಕ್ಷೆ ಎದುರಿಸಬೇಕಾಗುತ್ತದೆ. ನಮ್ಮ ಕುಟುಂಬದ ಸದಸ್ಯನಾಗಿ ಅವರನ್ನು ರಕ್ಷಿಸಲು ನಾನು ಬಯಸುವುದಿಲ್ಲ” ಎಂದು ಹೇಳಿದರು.

“ಈ ಪೆನ್ ಡ್ರೈವ್‌ಗಳ ವೈರಲ್ ಮಾಡಿರುವುದು ಕೂಡಾ ಘೋರ ಅಪರಾಧ. ಇದರಿಂದಾಗಿ ಕೆಲವು ಅಮಾಯಕ ಮಹಿಳೆಯರ ಚಾರಿತ್ರ್ಯ ಹರಣವಾಗಿದೆ. ಇದನ್ನು ಮಾಡಿದವರು ಯಾರು ಎಂದು ಕಂಡುಹಿಡಿಯುವುದು ಎಸ್‌ಐಟಿಯ ಜವಾಬ್ದಾರಿಯಾಗಿದೆ. ನಮ್ಮ ಮೈತ್ರಿ ಮುರಿಯಲು ಮತ್ತು ನಮ್ಮ ಗೆಲುವಿನ ಸಾಧ್ಯತೆ ಕಡಿಮೆ ಮಾಡಲು ಆ ಪೆನ್‌ಡ್ರೈವ್‌ಗಳನ್ನು ಬಳಸಲಾಗಿದೆ. ಇದು ಅಭ್ಯರ್ಥಿಗಳ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಎಚ್‌ಡಿಕೆ ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು?

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಈಗಾಗಲೇ 14 ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯು ಏ.26ರಂದು ನಡೆದಿದೆ. ಈ 14 ಕ್ಷೇತ್ರಗಳ ಪೈಕಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಜೊತೆಗೆ ಕೋಲಾರದಲ್ಲಿ ಮಲ್ಲೇಶ್ ಬಾಬು ಹಾಗೂ ಮಂಡ್ಯದಲ್ಲಿ ಕುಮಾರಸ್ವಾಮಿ ಅಭ್ಯರ್ಥಿಗಳಾಗಿ ನಿಂತಿದ್ದಾರೆ.

ಪ್ರಜ್ವಲ್ ಪ್ರಕರಣ ಈಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಈ ನಡುವೆಯೇ ಕುಮಾರಸ್ವಾಮಿಯವರು ರಾಷ್ಟ್ರೀಯ ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆಯಿಂದ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...