ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
“ಕಾಂಗ್ರೆಸ್ನ ತುಘಲಕ್ ಸರ್ಕಾರದ ಆಡಳಿತದಲ್ಲಿ ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಂತಾಗಿದೆ” ಎಂದು ಎಕ್ಸ್ ತಾಣದಲ್ಲಿ ಬರೆದಿದ್ದಾರೆ.
“ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರ ಚದರ ಅಡಿ (50X80) ವಿಸ್ತೀರ್ಣದ ವರೆಗಿನ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಆನ್ಲೈನ್ ಮೂಲಕ ನಕ್ಷೆ ಮಂಜೂರಾತಿಗೆ ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಬಿಟ್ಟಿ ಪ್ರಚಾರ ಪಡೆದುಕೊಂಡ ಕಾಂಗ್ರೆಸ್ ಸರ್ಕಾರ, ಈಗ ಏಕಾಏಕಿ ನಿಯಮ ಬದಲಾವಣೆ ಮಾಡಿ ಬಿಡಿಎ ಬಡಾವಣೆಗಳಲ್ಲಿರುವ ನಿವೇಶನಗಳಿಗೆ ಬಿಡಿಎ ಬಳಿಯೇ ನಕ್ಷೆ ಅನುಮತಿ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ” ಎಂದು ಕಿಡಿಕಾರಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!
“ಡಿಸಿಎಂ ಡಿ ಕೆ ಶಿವಕುಮಾರ್ ಅವರೇ ತಾವು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡುವಾಗ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲವೇ? ಬಿಬಿಎಂಪಿ ಮತ್ತು ಬಿಡಿಎ ನಡುವೆ ತಾಳಮೇಳವಿಲ್ಲದೆ ನಿಯಮಗಳನ್ನು ಮನಬಂದಂತೆ ಬದಲಾಯಿಸಿದರೆ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.
ಪುಣ್ಯಾತ್ಮ ನೀವು ಅಧಿಕಾರದಲ್ಲಿ ಇದ್ದಾಗ ಹೇತು ತಿಪ್ಪೆ ಸಾರಿಸಿ ರಂಗೋಲಿ ಹಾಕಿ ಹೋದಿರಿ,,ಇವರೂ ಈಗ ಅದನ್ನೇ ಮಾಡುತ್ತಿದ್ದಾರೆ,, ಎಲ್ಲರೂ ತುಡುಗರೆ ಜನರು ನಿಮ್ಮನ್ನು ಬೀದಿಯಲ್ಲಿ ಅಟ್ಟಾಡಿಸುವವರೆಗೂ ನಿಮ್ಮಗಳ ಮಂಗನಾಟ ಇಷ್ಟೇ