ಮಂಡ್ಯ ಬಂದ್‌ಗೆ ಜನರೇ ತಿರುಗಿ ಬಿದ್ದಿದ್ದಾರೆ, ಯಾವ ಪುರುಷಾರ್ಥಕ್ಕೆ ಬಿಜೆಪಿ, ಜೆಡಿಎಸ್‌ ಹೋರಾಟ?: ಚಲುವರಾಯಸ್ವಾಮಿ ಗುಡುಗು

Date:

Advertisements

ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಜೆಡಿಎಸ್‌–ಬಿಜೆಪಿಯವರು ಸತತ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮೈಸೂರಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, “ಧ್ವಜದ ವಿಚಾರದಲ್ಲಿ ಕರೆ ಕೊಟ್ಟಿರುವ ಮಂಡ್ಯ ಬಂದ್‌ಗೆ ಜನರೇ ತಿರುಗಿ ಬಿದ್ದಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನವರು ಹಾಗೂ ಬಿಜೆಪಿಯವರು ಮಂಡ್ಯದಲ್ಲಿ ಯಾವ ಪುರುಷಾರ್ಥಕ್ಕೆ ಹೋರಾಟ ಅಥವಾ ಬಂದ್ ಮಾಡುತ್ತಿದ್ದಾರೋ” ಎಂದು ಕುಟುಕಿದರು.

“ರೈತರಿಗಾಗಿ, ಕಾವೇರಿ ನೀರಿಗಾಗಿ ಹೋರಾಟ ಅಥವಾ ಬಂದ್ ಮಾಡಿದರೆ ನಾವೂ ಬೆಂಬಲಿಸುತ್ತೇವೆ. ಆದರೆ, ಧ್ವಜದ ವಿಚಾರದಲ್ಲಿ ಬಂದ್‌ಗೆ ಕರೆ ನೀಡಿರುವುದಕ್ಕೆ ಬಿಜೆಪಿ–ಜೆಡಿಎಸ್‌ನವರಿಗೆ ನಾಚಿಕೆಯಾಗಬೇಕು. ರಾಷ್ಟ್ರಧ್ವಜ ತೆಗೆಯಿರಿ ಎನ್ನುವುದು ಅವರ ಹೋರಾಟವೇ” ಎಂದು ಪ್ರಶ್ನಿಸಿದರು.

Advertisements

“ಕುಮಾರಸ್ವಾಮಿಯಿಂದ ವಿನಯದ ಬಗ್ಗೆ ನಾನು ಕಲಿಯಬೇಕಿಲ್ಲ. ನಾನು ಅವರಿಂದ ನಾಯಕನಾದವನಲ್ಲ. ದೇವೇಗೌಡರ ಮೇಲಿನ ಗೌರವದಿಂದಾಗಿ ಎಲ್ಲ ಸಹಿಸಿಕೊಂಡು ಸುಮ್ಮನಿದ್ದೇನೆ. ಇಲ್ಲದಿದ್ದರೆ ದೊಡ್ಡ ಪ್ರಮಾಣದಲ್ಲೇ ಉತ್ತರಿಸುತ್ತಿದ್ದೆ” ಎಂದು ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

“ನಾನೇನು ಕುಮಾರಸ್ವಾಮಿ ಮನೆಯ ಋಣದಲ್ಲಿದ್ದೇನೆಯೇ? ಅವರ ಆಸ್ತಿ ತಿಂದಿದ್ದೇನೆಯೇ? ಅವರೇನು ನನ್ನ ಹಣೆಬರಹ ಬರೆಯುತ್ತಾರೆ? ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಭೈರೇಗೌಡ ಅವರನ್ನು ಜೆಡಿಎಸ್‌ನಿಂದ ಹೊರ ಕಳುಹಿಸಿದ್ದು ಯಾರೆಂದು ಕುಮಾರಸ್ವಾಮಿ ಹೇಳಲಿ” ಎಂದು ಸವಾಲು ಹಾಕಿದರು.

ಮಂಡ್ಯದ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲೆಂಬ ಜೆಡಿಎಸ್‌ ಆಹ್ವಾನದ ಬಗ್ಗೆ ಪ್ರತಿಕ್ರಿಯಿಸಿ, “ನಾಚಿಕೆ ಆಗಬೇಕು ಅವರಿಗೆ. ಒಂದು ಅಂಗನವಾಡಿ ಕಟ್ಟಡ ಕಟ್ಟಲೂ ಆಗದವರು ಏನು ಚರ್ಚಿಸುತ್ತಾರೆ? ಅವರದ್ದು ಕೇವಲ ಹಿಟ್ ಅಂಡ್ ರನ್ ಕೇಸ್. ಚರ್ಚೆ ಮಾಡುವುದಿದ್ದರೆ ಮಂಡ್ಯಕ್ಕೆ ಬರಲಿ ಅಥವಾ ವಿಧಾನಮಂಡಲ ಅಧಿವೇಶನದಲ್ಲೇ ನಡೆಸಲು ಸಿದ್ಧವಿದ್ದೇನೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X