ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿ ಸಂಸದನ ವಿರುದ್ಧ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ” ಎಂದು ತಿಳಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಗುಂಡೂರಾವ್, “ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ಉ.ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ‘ಮಗನೇ’ ಎಂದು ಸಾರ್ವಜನಿಕವಾಗಿ ಹೀಗೆಳೆದಿದ್ದಾರೆ. ‘ಕುಲವಂ ನಾಲಗೆ ನುಡಿಯಿತು’ ಎಂಬಂತೆ ಉ.ಕನ್ನಡ ಸಂಸದರ ಸಂಸ್ಕಾರ ಅವರ ಮಾತುಗಳಲ್ಲೇ ತಿಳಿಯುತ್ತದೆ. ವಯಸ್ಸಿನಲ್ಲಿ ಹಾಗೂ ಅನುಭವದಲ್ಲಿ ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ” ಎಂದು ಜಾಡಿಸಿದ್ದಾರೆ.
2
ಸಿದ್ದರಾಮಯ್ಯರಿಗೆ ‘ಮಗನೇ’ ಎಂದು ಸಂಬೋಧಿಸಿರುವ ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ.ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ.
ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.?
ಬಾಯಿ ಬಿಟ್ಟರೆ ಹೊಡಿ, ಬಡಿ,…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 13, 2024
“ಶೋಷಿತ ಸಮುದಾಯದ ಧ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ ‘ಮಗನೇ’ ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ. ಸಿದ್ದರಾಮಯ್ಯರಿಗೆ ‘ಮಗನೇ’ ಎಂದು ಸಂಬೋಧಿಸಿರುವ ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ. ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ.?” ಎಂದು ಸಚಿವರು ಕೇಳಿದ್ದಾರೆ.
“ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ. ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ. ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.? ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು” ಎಂದು ಗುಂಡೂರಾವ್, ಬಿಜೆಪಿ ಸಂಸದನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.
“ಬಸವಣ್ಣ, ಕುವೆಂಪು, ನಾರಾಯಣ ಗುರು ಹಾಗೂ ಕನಕದಾಸರಂತಹ ಅನೇಕ ಮಹಾನ್ ವ್ಯಕ್ತಿಗಳು ಬದುಕಿ ಬಾಳಿದ ನೆಲವಿದು. ನಿಮ್ಮ ಕೊಳಕು ಮಾತುಗಳಿಂದ ಈ ನೆಲದ ಪಾವಿತ್ರ್ಯವನ್ನು ಹಾಳು ಮಾಡಬೇಡಿ” ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.
3
ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ.ನಿಮ್ಮಂತೆ ಹಿಂದುತ್ವದ ಅಮಲು ತುಂಬಿಕೊಂಡಿರುವ ಕೆಲವರಿಗೆ ಮಾತ್ರ ನಿಮ್ಮ ಅಸಹ್ಯದ ಮಾತುಗಳು ರುಚಿಸಬಹುದೇನೋ.?
ಆದರೆ ಪ್ರಜ್ಞಾವಂತ ಹಿಂದೂಗಳು ಯಾವತ್ತಿಗೂ ನಿಮ್ಮ ಮಾತು ಒಪ್ಪಲಾರರು.
ಬಸವಣ್ಣ,…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 13, 2024