ಕಾಂಗ್ರೆಸ್‌ನ ಜಾತಿ ರಾಜಕಾರಣವನ್ನು ಹರಿಯಾಣ ಜನ ತಿರಸ್ಕರಿಸಿದ್ದಾರೆ: ಸಂಸದ ಬೊಮ್ಮಾಯಿ

Date:

ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿದೆ. ಈದು ಇಡೀ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿಯವರ ನಾಯಕತ್ವ ಹಾಗೂ ಸ್ಥಳೀಯವಾಗಿ ಪಕ್ಷದ ಸಂಘಟನಾ ಶಕ್ತಿ ಕಾರಣ‌” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ರಾಜಧಾನಿ ದೆಹಲಿಗೆ ಹತ್ತಿರ ಇರುವ ರಾಜ್ಯದ ಚುನಾವಣೆ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದನ್ನು ಸೂಚಿಸುತ್ತಿದೆ. ಕಾಂಗ್ರೆಸ್‌ನವರು ಬಿಜೆಪಿಯನ್ನು ಸಂವಿಧಾನ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ಮಾಡಿದರು. ಆದರೆ, ಜನರು ಸಬ್ ಕೆ ಸಾತ್ ಸಬ್ ಕಾ ವಿಕಾಸ್, ಶ್ರೇಷ್ಠ ಭಾರತ, ಅಮೃತ ಕಾಲ ವಿಚಾರಗಳಿಗೆ ಜನರು ಬೆಂಬಲ ಕೊಟ್ಟಿದ್ದಾರೆ. ಮಹಾರಾಷ್ಡದಲ್ಲಿಯೂ ಇದೆ ರೀತಿಯ ಫಲಿತಾಂಶ ಬರುವ ವಿಶ್ವಾಸ ಇದೆ‌” ಎಂದು ಹೇಳಿದರು.

“ಜಮ್ಮು ಕಾಶ್ಮೀರ ಸಾಮಾಜಿಕವಾಗಿ ಸೂಕ್ಷ ರಾಜ್ಯ ಅಲ್ಲಿ ಕಣಿವೆ ಹೊರಗೆ ನಮಗೆ ಬೆಂಬಲ ಸಿಕ್ಕಿದೆ. ಇನ್ನೂ ರಾಜಕಾರಣ ಇದೆ. ಇದೇ ಅಂತಿಮ ಅಲ್ಲ. ಹರಿಯಾಣದಲ್ಲಿನ ಸೋಲಿನ ಬಗ್ಗೆ ಕಾಂಗ್ರೆಸ್ ಗೌರವಯುತವಾಗಿ ಒಪ್ಪಿಕೊಂಡರೆ ಗೌರವ ಕೊಡುತ್ತೇವೆ, ಕುಂಟು ನೆಪ ಹೇಳಿದರೆ ಎದುರು ಉತ್ತರ ಕೊಡುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...