ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

Date:

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ದಿನದಂದೇ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿದೆ.

- Advertisement -

ಬೆಂಗಳೂರಿನ ಹೆಬ್ಬಾಳ ಮೇಲು ಸೇತುವೆಯ ಮೇಖ್ರಿ ಸರ್ಕಲ್‌ನಲ್ಲಿ ಚೊಂಬು ಹಿಡಿದುಕೊಂಡು ಪ್ರತಿಭಟನೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಚೊಂಬನ್ನು ಹಿಡಿದುಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಗುಂದ್, ಬಿ.ಆರ್ ನಾಯ್ಡು, ಕೆಪಿಸಿಸಿ ಉಪಾಧ್ಯಕ್ಷ ಎಸ್ ಈ ಸುದೀಂಧ್ರ, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್ ಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, “ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಘೋರ ಅನ್ಯಾಯ ಮಾಡಿದೆ. ಕರ್ನಾಟಕದ ಜನರು, ರೈತರು ಬರ ಪರಿಹಾರ ಕೇಳಿದರೆ ಬಿಜೆಪಿ ಸರ್ಕಾರ ಖಾಲಿ ಚೊಂಬು ನೀಡಿದೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೇಳಿದರೆ ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ಚೊಂಬು” ಎಂದು ಕಿಡಿಕಾರಿದರು.

“ಕರ್ನಾಟಕದ ಜನ ಭದ್ರ ಮೇಲ್ದಂಡೆ ಯೋಜನೆಗೆ 6 ಸಾವಿರ ಕೋಟಿ ಕೇಳಿದರೆ, ಕೇಂದ್ರ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಹಣವನ್ನು ಕೇಳಿದರೆ ಪ್ರಧಾನಮಂತ್ರಿಗಳು ಚೊಂಬು ನೀಡಿದ್ದಾರೆ. ದೇಶದ ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಕೈಗೆ ಕೊಟ್ಟಿದ್ದು ಚೊಂಬು. ಕೇಂದ್ರ ಸರ್ಕಾರಕ್ಕೆ ಚುನಾವಣೆ ಬಾಂಡ್ ಬಗ್ಗೆ ಕೇಳಿದರೆ ಚೊಂಬು ನೀಡುತ್ತಾರೆ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಕರ್ನಾಟಕ ಹಾಗೂ ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...