ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಜನ, ಬೇರೆ ಯಾರೋ ಅಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೋ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ. ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ” ಎಂದು ತಿಳಿಸಿದರು.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ. ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ” ಎಂದರು.

ಯೋಗ ನಮ್ಮ ದೇಶದ ಆಸ್ತಿ

“ಯೋಗಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದ್ದು, ದೇಶ ಮಾತ್ರವಲ್ಲದೇ ಇಡೀ ವಿಶ್ವ ನಮ್ಮ ಧರ್ಮ, ಸಂಸ್ಕೃತಿ, ಪದ್ಧತಿಯಾಗಿರುವ ಯೋಗವನ್ನು ಒಪ್ಪಿದೆ. ಅನೇಕ ಹಿರಿಯರು, ಋಷಿಗಳು ಇದಕ್ಕೆ ಕೊಡುಗೆ ನೀಡಿದ್ದು, ಯೋಗಕ್ಕೆ ಯಾವುದೇ ಜಾತಿ, ಕುಲ, ಧರ್ಮದ ಎಲ್ಲೆ ಇಲ್ಲ. ನನಗೆ ಯೋಗಾಭ್ಯಾಸವಿಲ್ಲ. ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುತ್ತಿದ್ದೆ” ಎಂದರು.

“ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನೀವು ಆರೋಗ್ಯವಂತರಾಗಿರಬೇಕು, ಮಾನಸಿಕವಾಗಿ ಶಕ್ತಿಶಾಲಿಯಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದೆ. ಹಿರಿಯರು, ಕಿರಿಯರು ಸೇರಿದಂತೆ ಎಲ್ಲಾ ವರ್ಗದ ಜನರು ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಿರಲಿ” ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...