ಬೆಂಗಳೂರಿನ ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಶಾಶ್ವತ ನಿರ್ವಹಣಾ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರಿನಲ್ಲಿ ಇಂದು ಸಿಟಿ ರೌಂಡ್ಸ್‌ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮುಂದಾಗುವ ಅನಾಹುತವನ್ನು ತಪ್ಪಿಸಬೇಕು. ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

- Advertisement -

“ಬೆಂಗಳೂರು ನಗರದ ವಾರ್ಡ್ ರಸ್ತೆಗಳಲ್ಲಿ ಸುಮಾರು 5500 ಗುಂಡಿಗಳು ಬಿದ್ದಿದೆ. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ಎಲ್ಲ ಗುಂಡಿಗಳನ್ನು ತಿಂಗಳಲ್ಲಿ ಭರ್ತಿ ಮಾಡಿ, ಮುಚ್ಚಬೇಕು ಎಂದು ಸೂಚಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ. ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

“ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.

ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಸಜ್ಜಾಗಲು ಕರೆ

“ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು” ಎಂದು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

“ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನು ಓದಿದ್ದೀರಾ? ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

“ಜೂನ್‌ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಅದರಂತೆ ಪರಿಶೀಲಿಸಲಾಗಿದೆ” ಎಂದ ಸಿಎಂ ಸಿದ್ದರಾಮಯ್ಯ, ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು.

ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ

ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು” ಎಂದರು.

ವಿಪಕ್ಷ ನಾಯಕ ಆರ್ ಅಶೋಕ್‌ ಟೀಕೆಗೆ ಸಿಎಂ ತಿರುಗೇಟು

“ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಳ್ಳಲು ಬೆಂಗಳೂರು ಸಿಟಿ ರೌಂಡ್ಸ್‌ಗೆ ಹೋಗಿದ್ದಾರೆ” ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, “ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...