ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಅರ್ಜಿ: ಶಾಸಕ ನೆಹರೂ ಓಲೆಕಾರ್ ವಿರುದ್ಧ ಹೈಕೋರ್ಟ್ ಕಿಡಿ

Date:

  • ಆದೇಶ ಕಾಯ್ದಿರಿಸಿದ ಹೈಕೋರ್ಟ್‌ ನ್ಯಾ. ಕೆ ನಟರಾಜನ್ ನೇತೃತ್ವದ ಪೀಠ
  • ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ, ಇವರನ್ನೇಕೆ ಮಾಡಿಲ್ಲ?

ಬೆಂಗಳೂರಿನ ವಿಶೇಷ ನ್ಯಾಯಾಲಯವು ತಮ್ಮ ವಿರುದ್ಧ ನೀಡಿದ್ದ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ನೆಹರೂ ಓಲೆಕಾರ್ ವಿರುದ್ಧ ಕರ್ನಾಟಕ ಹೈಕೋರ್ಟ್‌ ಕಿಡಿ ಕಾರಿದ್ದು, ಬೇರೆಯವರನ್ನಾದರೆ ತಕ್ಷಣವೇ ಅನರ್ಹಗೊಳಿಸಲಾಗುತ್ತದೆ, ಇವರನ್ನೇಕೆ ಅನರ್ಹಗೊಳಿಸಿಲ್ಲ? ಎಂದು ಪ್ರಶ್ನಿಸಿದೆ.

ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ಹಣ ನಷ್ಟ ಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ನೆಹರೂ ಓಲೆಕಾರ್ ಅವರನ್ನು ದೋಷಿ ಎಂದು ಪರಿಗಣಿಸಿ, ಶಿಕ್ಷೆ ವಿಧಿಸಿತ್ತು.

ಓಲೆಕಾರ್ ಪರ ವಾದ ಮಂಡಿಸಿದ ವಕೀಲರು, “ಈ ಪ್ರಕರಣದಲ್ಲಿ ಅರ್ಜಿದಾರರು ಯಾವುದೇ ಕ್ರಿಮಿನಲ್ ಒಳಸಂಚು ರೂಪಿಸಿಲ್ಲ. ಅಧೀನ ನ್ಯಾಯಾಲಯದ ಆದೇಶವು ದೋಷಪೂರಿತವಾಗಿದೆ ಎಂದು ಮೇಲ್ನೋಟಕ್ಕೇ ಕಾಣಿಸುತ್ತಿದೆ ಎಂದಿ ಹೈಕೋರ್ಟ್ ಅಭಿಪ್ರಾಯಕ್ಕೆ ಬಂದು, ಅರ್ಜಿದಾರರಿಗೆ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ಕೂಡ ನೀಡಿದೆ. ಶಿಕ್ಷೆ ವಿಧಿಸಿದ ಆದೇಶವು ದೋಷಪೂರಿತ ಎಂದಾದರೆ ಇದರ ಪರಿಣಾಮವನ್ನು ಆರೋಪಿ ಎದುರಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲದ ಕಾರಣ ನಮ್ಮ ಕಕ್ಷಿದಾರನನ್ನು ದೋಷಿಯಾಗಿ ತೀರ್ಮಾನಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು” ಎಂದು ಮನವಿ ಮಾಡಿಕೊಂಡರು.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪೀಠವು “ನೆಹರು ಓಲೆಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆಯೇ” ಎಂದು ಪ್ರಶ್ನಿಸಿದರು. ಇದಕ್ಕೆ ಓಲೆಕಾರ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು.

ಇದಕ್ಕೆ ಕೋಪಗೊಂಡ ನ್ಯಾಯಾಧೀಶರು “ಏಕೆ ಇನ್ನೂ ಅನರ್ಹಗೊಳಿಸಿಲ್ಲ? ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ?” ಎಂದು ಮರು ಪ್ರಶ್ನಿಸಿತು.

ಈ ಸುದ್ದಿ ಓದಿದ್ದೀರಾ? : ಶಾಸಕ ಜಮೀರ್‌ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಇದಕ್ಕೆ ಉತ್ತರಿಸಿದ ಓಲೆಕಾರ್ ಪರ ವಕೀಲರು, “ಶಾಸಕರನ್ನು ಅನರ್ಹಗೊಳಿಸುವ ವಿಚಾರ ಸ್ಪೀಕರ್ ಅವರ ಅಧಿಕಾರದ ವ್ಯಾಪ್ತಿಗೆ ಬರುತ್ತದೆ. ಅವರು ತಮ್ಮ ವಿವೇಚನೆ ಬಳಸಿ ತೀರ್ಮಾನಿಸುತ್ತಾರೆ. ಆದರೆ, ದೋಷಿಯಾಗಿ ತೀರ್ಮಾನಿಸಿರುವ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವ ವಿಚಾರಕ್ಕೂ, ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ” ಎಂದು ಉತ್ತರಿಸಿದರು.

ಅರ್ಜಿದಾರರ ಮನವಿಯನ್ನು ಆಕ್ಷೇಪಿಸಿದ ಲೋಕಾಯುಕ್ತ ಪರ ವಕೀಲರು, “ಕ್ರಿಮಿನಲ್ ಪ್ರಕರಣದಲ್ಲಿ ಚುನಾಯಿತ ಜನ ಪ್ರತಿನಿಧಿಗಳು 2 ವರ್ಷಗಳ ಕಾಲ ಶಿಕ್ಷೆಗೆ ಗುರಿಯಾದರೆ, ಅಂತಹವರ ಸ್ಥಾನ ತನ್ನಿಂದ ತಾನೇ ಅನರ್ಹವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಪಿತೂರಿ ನಡೆಸಿರುವ ಬಗ್ಗೆ ಸಾಕ್ಷ್ಯಾಧಾರಗಳ ಸಮೇತ ವಿಶೇಷ ನ್ಯಾಯಾಲಯದಲ್ಲಿ ದೃಢಪಟ್ಟಿದೆ. ಆದ್ದರಿಂದ ಅವರ ಮನವಿ ಪುರಸ್ಕರಿಸದೇ, ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.

ಎರಡು ಕಡೆಯವರ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್...