ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ಶಾಸಕ ಸಲ್ಲಿಸಿದ್ದ ಅರ್ಜಿ ವಜಾ

Date:

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಶಾಸಕ ರೇಣುಕಾಚಾರ್ಯ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಮೂಲದ ಗುರುಪಾದಯ್ಯ ಮಠದ್ ಎಂಬುವರು ದಾವಣಗೆರೆಯ ಲೋಕಾಯುಕ್ತಕ್ಕೆ 2015ರ ಏಪ್ರಿಲ್‌ 28ರಂದು ಖಾಸಗಿ ದೂರು ಸಲ್ಲಿಸಿದ್ದರು. ಅವರ ದೂರಿನ ಆಧಾರ ಮೇಲೆ ರೇಣುಕಾಚಾರ್ಯ ವಿರುದ್ಧ 2015ರಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ರೇಣುಕಾಚಾರ್ಯ ಮತ್ತು ಅವರ ಕುಟುಂಬದ ಸದಸ್ಯರ ಮನೆ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ವಿಚಾರಣೆ ದಾವಣಗೆರೆಯ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಮಧ್ಯೆ, ತಮ್ಮ ಮೇಲಿನ ಪ್ರಕರಣವನ್ನು ರದ್ದುಗೊಳಿಸಬೇಕೆಂದು ರೇಣುಕಾಚಾರ್ಯ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್‌ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ?: ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಅರ್ಜಿ ವಿಚಾರಣೆ ವೇಳೆ ಲೋಕಾಯುಕ್ತ ಪರವಾಗಿ ವಕೀಲ ಬಿ.ಎಸ್ ಪ್ರಸಾದ್ ವಾದ ಮಂಡಿಸಿದ್ದಾರೆ. “2015ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಿದ್ಧಪಡಿಸಿದ್ದಾರೆ. ಆದರೆ, ಆರೋಪಿಯು ಜನಪ್ರತಿನಿಧಿಯಾಗಿರುವುದರಿಂದ, ವರದಿ ಸಲ್ಲಿಸಲು ಸಮಕ್ಷ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು. ಪ್ರಾಧಿಕಾರ ಅನುಮತಿ ನೀಡಿದ ಕೂಡಲೇ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಇಂತಹ ಸಮಯದಲ್ಲಿ ಆರೋಪಿ ವಿರುದ್ಧದ ಎಫ್‌ಐಆರ್‌ ರದ್ದುಮಾಡಬಾರದು” ಎಂದು ಮನವಿ ಮಾಡಿದ್ದರು.

ಅವರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್‌, ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ...

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...