ರಾಜ್ಯದಲ್ಲಿ ಮಂಗಳವಾರ 2ನೇ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ಇಂದು ತೆರೆ; 14 ಕ್ಷೇತ್ರಗಳಲ್ಲಿ ಗೆಲ್ಲೋದ್ಯಾರು?

Date:

Advertisements

ಕರ್ನಾಟಕದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದ ಮತದಾನ ಮಂಗಳವಾರ (ಮೇ 7) ನಡೆಯಲಿದೆ. ಇಂದು (ಭಾನುವಾರ) ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹಾಲಿ ಸಂಸದರು, ಸಚಿವರ ಮಕ್ಕಳು, ಘಟಾನುಘಟಿ ನಾಯಕರು ಕಣದಲ್ಲಿದ್ದು, ಮತದಾರರು ಯಾರಿಗೆ ಮತಹಾಕುತ್ತಾರೆ ಎಂಬುದು ಕೌತುಕ ಮೂಡಿಸಿದೆ.

ಇಂದು ಸಂಜೆವರೆಗಷ್ಟೇ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು, ಎಲ್ಲ ಅಭ್ಯರ್ಥಿಗಳು ಅಂತಿಮ ಸುತ್ತಿನ ಪ್ರಚಾರದ ಭರಾಟೆಯಲ್ಲಿದ್ದಾರೆ. ಸಂಜೆ 6ಗಂಟೆಯ ನಂತರ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು ಕ್ಷೇತ್ರಗಳನ್ನು ತೊರೆಯಬೇಕೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ರಾಜ್ಯದ ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ(ಎಸ್ಸಿ), ಕಲಬುರಗಿ(ಎಸ್ಸಿ), ರಾಯಚೂರು(ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Advertisements

ಈ  14 ಲೋಕಸಭಾ ಕ್ಷೇತ್ರಗಳಲ್ಲಿ 21 ಮಂದಿ ಮಹಿಳೆಯರು, 206 ಮಂದಿ ಪುರುಷರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 14 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳಾಗಿ ಬಿಜೆಪಿಯವರೇ ಸ್ಪರ್ಧಿಸಿದ್ದಾರೆ.

ಈ ನಡುವೆ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ರಾಷ್ಟ್ರಾಧ್ಯಕ್ಷ ಆಕ್ರೋಶಕ್ಕೆ ಕಾರಣವಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ನೂರಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಹಗರಣವು ಚುನಾವಣೆಯಲ್ಲಿ ಬಿಜೆಪಿ ಹೊಡೆತ ನೀಡಲಿದೆ ಎಂದೂ ಹೇಳಲಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X