ನಟರು ರಾಜಕೀಯಕ್ಕೆ ಬರ್ತಾರೆ, ಹೋಗ್ತಾರೆ; ವಿಜಯ್ ಜತೆ ಬಿಜೆಪಿ ಮೈತ್ರಿಯಿಲ್ಲ: ಪಿಯೂಷ್ ಗೋಯಲ್

Date:

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ಪಕ್ಷ ಟಿವಿಕೆ ಜತೆ ಯಾವುದೇ ಮೈತ್ರಿಯಿಲ್ಲ. ಅಂತಹ ನಟರು ರಾಜಕೀಯಕ್ಕೆ ಬರ್ತಾರೆ, ಹೋಗ್ತಾರೆ. ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲ್ಲ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ.

- Advertisement -

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗೋಯಲ್ ಅವರು, “ವಿಜಯ್ ಚುನಾವಣೆಗಳ ಮೇಲೆ ಯಾವ ಪರಿಣಾಮ ಬೀರುತ್ತಾರೆಂದು ನನಗೆ ತಿಳಿದಿಲ್ಲ. ಆದರೆ ನಾನು ಅನೇಕ ಚಲನಚಿತ್ರ ತಾರೆಯರು ರಾಜಕೀಯಕ್ಕೆ ಬಂದು ಹೋಗಿರುವುದನ್ನು ನೋಡಿದ್ದೇನೆ. ಕಮಲ್ ಹಾಸನ್ ಯಾವುದೇ ಪ್ರಭಾವವಿಲ್ಲದೆ ಬಂದಿರುವುದನ್ನು ನಾವು ನೋಡಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ? ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

“ಅಭಿಮಾನಿಗಳನ್ನು ಹೊಂದಿರುವುದು ಬೇರೆಯೇ ವಿಚಾರ, ಅವರನ್ನು ತಮ್ಮ ಮತದಾರರನ್ನಾಗಿ ಪರಿವರ್ತಿಸುವುದು ಸಂಪೂರ್ಣವಾಗಿ ಬೇರೆಯೇ ವಿಚಾರ. ಬಿಜೆಪಿ ವಿಜಯ್ ಅವರನ್ನು ಓಲೈಸುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತಮಿಳುನಾಡಿನಲ್ಲಿ ಗೆಲ್ಲುವ ವಿಶ್ವಾಸವನ್ನು ಈ ಸಂದರ್ಭದಲ್ಲೇ ಗೋಯಲ್ ವ್ಯಕ್ತಪಡಿಸಿದ್ದಾರೆ. “ಡಿಎಂಕೆ ಸರ್ಕಾರದ ವಿರುದ್ಧ ತೀವ್ರವಾದ ಆಡಳಿತ ವಿರೋಧಿ ಅಲೆ ಇದೆ. ಅದು ಅಸಮರ್ಥ ಮತ್ತು ಅತಿ ಭ್ರಷ್ಟ ಸರ್ಕಾರ” ಎಂದು ದೂರಿದ್ದಾರೆ.

“ಉದಯನಿಧಿ ಸ್ಟಾಲಿನ್ (ತಮಿಳುನಾಡು ಉಪಮುಖ್ಯಮಂತ್ರಿ) ಸಂಪೂರ್ಣವಾಗಿ ತಮಿಳು ವಿರೋಧಿ ಸಂಸ್ಕೃತಿ ಮತ್ತು ಭಾರತ ವಿರೋಧಿ ನಿಲುವನ್ನು ಹೊಂದಿರುವವರು. ಅವರು ಬಳಸುವ ಭಾಷೆ ತಮಿಳು ಸಂಸ್ಕೃತಿಯಲ್ಲ. ತಮಿಳು ಸಂಸ್ಕೃತಿ ನಮಗೆ ಸಹಿಷ್ಣುತೆಯನ್ನು ಕಲಿಸುತ್ತದೆ. ವಿಭಿನ್ನ ಚಿಂತನೆ, ಸಿದ್ಧಾಂತಗಳು ಮತ್ತು ಧರ್ಮಗಳನ್ನು ಆಚರಿಸಲು ನಮಗೆ ಕಲಿಸುತ್ತದೆ” ಎಂದೂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...