ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

Date:

“ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು.

- Advertisement -

“ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು ಅನುಮತಿಬೇಕು ಎಂದು ಪತ್ರ ಬರೆದಿದ್ದು, ಸದ್ಯದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಸವ ಉದ್ಯಾನ : ಭಾಲ್ಕಿ ಶ್ರೀ ಹರ್ಷ

“ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ನಿರ್ಮಿಸಲು ಆಲೋಚಿಸಿದ್ದೇವೆ. ನಮ್ಮ ಕಾಲದಲ್ಲಿ ನಗರದ ಹಸಿರು ಕಾಪಾಡಿ, ಸಾರ್ವಜನಿಕರ ಬದುಕಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೇವೆ” ಎಂದು ಹೇಳಿದರು.

“ನಾಗರಿಕರು ಬಂದು ಈ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಬೇಕು”

“ಲಾಲ್‌ಬಾಗ್ ಕೇವಲ ಉದ್ಯಾನವನ ಮಾತ್ರವಲ್ಲ. ಇದೊಂದು ಇತಿಹಾಸ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಈ ಫಲಪುಷ್ಟ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ. ಇದು ನಮ್ಮ ಸಂಸ್ಕೃತಿ, ರೈತರ ಬದುಕು ಹಾಗೂ ಕಲೆಯ ಸಂಭ್ರಮ. ಈ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ನಾಡಿನ ಜನತೆ ಈ ಫಲಪುಷ್ಟ ಪ್ರದರ್ಶನ ವೀಕ್ಷಿಸಿ ಆನಂದಿಸಬೇಕು” ಎಂದರು.

“ಯುವಕರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಈ ಕಾರ್ಯಕ್ರಮವನ್ನು ನಾನು ಉದ್ಘಾಟಿಸಿರುವುದು ಸಂತೋಷ ತಂದಿದೆ. 10 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ. ಲಾಲ್‌ ಬಾಗ್‌ ಅನ್ನು ಹೈದರಾಲಿ ಸ್ಥಾಪಿಸಿದರು, ಬ್ರಿಟೀಷರು ಅಭಿವೃದ್ದಿ ಮಾಡಿದರು. ಈಗ ಕರ್ನಾಟಕ ಸರ್ಕಾರ ಮುಂದುವರಿಸುತ್ತಿದೆ” ಎಂದು ತಿಳಿಸಿದರು.

“ಈ ವರ್ಷ ಗಂಗ ಸಾಮ್ರಾಜ್ಯ ರೂಪುಗೊಂಡಿದೆ. ದಕ್ಷಿಣ ಭಾರತದ ಗಂಗರ ಸಾಮ್ರಾಜ್ಯದ ವೈಭವವನ್ನು ಪುಷ್ಪಗಳ ಮೂಲಕ ಮೂಡಿಸಲಾಗಿದೆ. ಅವರ ಹೋರಾಟ, ಸಂಸ್ಕೃತಿ ಎಲ್ಲವೂ ಇಲ್ಲಿ ಅನಾವರಣಗೊಂಡಿದೆ. ಗಂಗರ ಇತಿಹಾಸ ಕರ್ನಾಟಕ ರಾಜ್ಯದ ಇತಿಹಾಸದ ಭಾಗ. ತೋಟಗಾರಿಕಾ ಇಲಾಖೆಯವರು ಈ ಪರಿಕಲ್ಪನೆಯನ್ನು ಅತ್ಯುತ್ತಮವಾಗಿ ರೂಪಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಉಡುಪಿ | ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪ : ಎಂ.ಎ. ಗಫೂರ್

“ರಾಜ್ಯದಲ್ಲಿ ಹಸಿರು ಹೆಚ್ಚಿಸಿ ರೈತರ ಬದುಕು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದ್ದೇವೆ. ಇದು ರೈತರು ಹಾಗೂ ಸರ್ಕಾರದ ನಡುವಿನ ಪಾಲುದಾರಿಕೆಯ ಕಾರ್ಯಕ್ರಮವಾಗಿದೆ. ಇದನ್ನು ಆಗಸ್ಟ್ 15ರಂದು ಪ್ರಕಟಿಸುತ್ತೇವೆ. ಸರ್ಕಾರದ 100 ದಿನಗಳ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಬದುಕಿಗೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಆಲೋಚಿಸಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ” ಎಂದರು.

“ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು”

ಕಾಂಗ್ರೆಸ್ ಹಿರಿಯ ನಾಯಕರ ಮನೆಗೆ ಭೇಟಿ ನೀಡಿದ್ದು ಸಮಸ್ಯೆ ಬಗೆಹರಿಸಲಾಗಿದೆಯೇ ಎಂದು ಕೇಳಿದಾಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಇರುವುದು ಮಾಧ್ಯಮಗಳಲ್ಲಿ. ನಮ್ಮ ಹಿರಿಯ ನಾಯಕರ ಭಾವನೆಗೆ ನಾವು ಗೌರವ ಸಲ್ಲಿಸಬೇಕು. 140 ಶಾಸಕರು ಹಾಗೂ 40 ಪರಿಷತ್ ಸದಸ್ಯರಿದ್ದು, ಆ ಪೈಕಿ ನಾವು ಸಚಿವ ಸ್ಥಾನ ನೀಡಲು ಸಾಧ್ಯವಿರುವುದು ಕೇವಲ 33 ಜನರಿಗೆ ಮಾತ್ರ. ನಮ್ಮ ಪಕ್ಷದಲ್ಲಿ ಎಲ್ಲರೂ ಅರ್ಹರೆ. ನಾವು ಅವರ ಆಸೆ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿದ್ದು, ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...