ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

Date:

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮಂಗಳವಾರ ಹೇಳಿದ್ದಾರೆ.

- Advertisement -

“ಭಾರತದ ಇತಿಹಾಸದಲ್ಲಿ ಯಾವುದೇ ಪ್ರಧಾನಿ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗಲಿಲ್ಲ, ಆದರೆ ಪ್ರಧಾನಿ ಮೋದಿ ಅವರು ಭಾರತೀಯ ವಿದ್ಯಾರ್ಥಿಗಳ ರಕ್ಷಣೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದರು” ಎಂದು ಶಿಂದೆ ವಿಧಾನಸಭೆಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದಾಗ, ಅನೇಕ ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡರು. ಆ ವೇಳೆ ಇಲ್ಲಿನ ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಹೊರತರುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದರು. ಅದರ ನಂತರ, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಮೋದಿ ಎರಡು ಗಂಟೆಗಳ ಕಾಲ ಯುದ್ಧವನ್ನು ಯಶಸ್ವಿಯಾಗಿ ನಿಲ್ಲಿಸಿದರು” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದೆ ಎಂದಿದ್ದ ಮೋದಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲಾಗುತ್ತಿಲ್ಲ: ರಾಹುಲ್ ಗಾಂಧಿ

ಇನ್ನು ಇದೇ ಸಂದರ್ಭದಲ್ಲಿ ತಮ್ಮ ಸರ್ಕಾರವು ಛತ್ರಪತಿ ಶಿವಾಜಿ ಮಹಾರಾಜರ ‘ಹುಲಿ ಪಂಜ’ ಅಸ್ತ್ರವನ್ನು ಲಂಡನ್‌ನಿಂದ ವಿಧಾನಸಭಾ ಚುನಾವಣೆಗೂ ಮುನ್ನ ತರಲಿದೆ ಎಂದು ಶಿಂದೆ ತಿಳಿಸಿದರು. 1659ರಲ್ಲಿ ಬಿಜಾಪುರ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಸೋಲಿಸಲು ಶಿವಾಜಿ ಅಸ್ತ್ರವನ್ನು ಬಳಸಿದ್ದರು.

ಇನ್ನು ಈ ಸಂದರ್ಭದಲ್ಲೇ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡ ಅವರು, “ಕಾಂಗ್ರೆಸ್ ಬಡತನ ನಿರ್ಮೂಲನೆಯ ಬಗ್ಗೆ ಮಾತನಾಡುತ್ತದೆ. ಆದರೆ ಅವರು ಅದನ್ನು ಮಾಡಿದ್ದಾರೆಯೇ? ಪ್ರಧಾನಿ ಮೋದಿಯವರು 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಿದ್ದಾರೆ” ಎಂದು ಹೇಳಿಕೊಂಡರು.

ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು ಎಂಬ ಬಿಜೆಪಿ ನಾಯಕರ ಹೇಳಿಕೆಯು ಈಗಾಗಲೇ ಭಾರೀ ಟ್ರೋಲ್‌ಗೆ ಒಳಗಾಗಿದೆ. ಉಕ್ರೇನ್ ಯುದ್ಧವನ್ನು ನಿಲ್ಲಿಸಿದ ಪ್ರಧಾನಿಗೆ ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಲು ಸಾಧ್ಯವಾಗುವುದಿಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಯುದ್ಧ ನಿಲ್ಲಿಸುವಂತಹ ಸಾಮರ್ಥ್ಯ ಇದೆ ಎಂದಾದರೆ ಉಕ್ರೇನ್ ರಷ್ಯಾ ಯುದ್ಧವು ಕೊನೆಯಾಗುವಂತೆ ಮಾಡಲಿ ಎಂದು ನೆಟ್ಟಿಗರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...