ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಲು ಬಿಜೆಪಿ ನಾಯಕರಿಗೆ ಮೋದಿ ಕರೆ

Date:

Advertisements

ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.

2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ(ಆಗಸ್ಟ್ 02) ರಾತ್ರಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರ ಸಭೆಯಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಸಂಪರ್ಕ ಸಾಧಿಸುವುದು ಅತ್ಯಗತ್ಯ. ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ವರಿತವಾಗಿ ನೀಡುವ ವಿಚ್ಛೇದನದ ಪದ್ಧತಿಯನ್ನು ಈ ಸರ್ಕಾರ ಅಪರಾಧ ಎಂದು ಪರಿಗಣಿಸಿದೆ. ನಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚಿನ ಧೈರ್ಯ ತುಂಬಿದೆ. ಆಗಸ್ಟ್‌ 30 ರಂದು ಆಚರಿಸಲಾಗುವ ಈ ಬಾರಿಯ ರಕ್ಷಾ ಬಂಧನ ಹಬ್ಬ ಅಲ್ಪಸಂಖ್ಯಾತ ಮಹಿಳೆಯರಿಗೆ ತಲುಪಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಯನ್ನು 2019 ರಲ್ಲಿ ಸಂಸತ್ತು ಅಂಗೀಕರಿಸಿತು. ತ್ವರಿತ ತ್ರಿವಳಿ ತಲಾಖ್ ಆಚರಣೆಯನ್ನು ಕಾನೂನುಬಾಹಿರ ಮತ್ತು ಪತಿಗೆ ಜೈಲು ಶಿಕ್ಷೆ ವಿಧಿಸುವ ಅಪರಾಧ ಎಂದು ಘೋಷಿಸಲಾಯಿತು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಬಿಜೆಪಿಯು ಎನ್‌ಡಿಎ ಸಂಸದರನ್ನು ಪ್ರದೇಶವಾರು ಒಂದಕ್ಕೆ 40 ಸದಸ್ಯರಂತೆ ಹಲವು ಗುಂಪುಗಳಾಗಿ ವಿಂಗಡಿಸಿದೆ. ಸದ್ಯ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಧಾನಮಂತ್ರಿ ಈ ಕುರಿತು ಪ್ರತ್ಯೇಕವಾಗಿ ಮಾತನಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮೊದಲ ಎರಡು ಸಭೆಗಳು ಸೋಮವಾರ ನಡೆದವು. ಉತ್ತರ ಪ್ರದೇಶದ ಪಶ್ಚಿಮ ಭಾಗದಿಂದ ಕಾನ್ಪುರ-ಬುಂದೇಲ್‌ಖಂಡ್ ಪ್ರದೇಶದವರೆಗೆ ಸುಮಾರು 45 ಎನ್‌ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X