ಮಣಿಪುರ | ಮಹಿಳೆಯರ ಮೇಲಿನ ದೌರ್ಜನ್ಯ; ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ

Date:

ಮಣಿಪುರದಲ್ಲಿ ವಿಕೃತ ಮನಸ್ಸಿನ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದ 79 ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಘಟನೆಯು ಹೇಯ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳುವ ಮೂಲಕ ಕೃತ್ಯವನ್ನು ಖಂಡಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಅವರು, “ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ.ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

“ಮಣಿಪುರದ ಘಟನೆಯು ಯಾವುದೇ ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ.ಯಾವುದೇ ಸಮಾಜಕ್ಕೆ ಇದು ನಾಚಿಕೆಗೇಡಿನ ಘಟನೆ. ಯಾರು ಇದನ್ನು ಮಾಡಿದರು, ಇದಕ್ಕೆ ಯಾರು ಹೊಣೆಗಾರರು ಎಂಬುದು ಇನ್ನೊಂದು ವಿಷಯ. ಆದರೆ ಇದು ನಮ್ಮ ದೇಶವನ್ನು ನಾಚಿಕೆಪಡುವಂತೆ ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಘಡ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ” ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿಂಸಾಚಾರ ಶುರುವಾಗಿ ಎರಡೂವರೆ ತಿಂಗಳವರೆಗೂ ಬಾಯಿ ಬಿಡದಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಮೊದಲ ಬಾರಿಗೆ ಮಾತನಾಡಿರುವುದಕ್ಕೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿವೆ.

ಕಣಿವೆ ರಾಜ್ಯದಲ್ಲಿ ಜನಾಂಗೀಯ ಗಲಭೆಯಿಂದಾಗಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಮಂದಿ ಗಾಯಗೊಂಡಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಮಣಿಪುರ ಹಿಂಸಾಚಾರವನ್ನು ಸಂಸತ್ತಿನಲ್ಲಿ ತಕ್ಷಣವೇ ಚರ್ಚಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...