ಪ್ರಧಾನಿ ಮೋದಿಗೆ ಕಳ್ಳತನದ ಅಭ್ಯಾಸವಿದೆ: ಮಲ್ಲಿಕಾರ್ಜುನ ಖರ್ಗೆ ಆರೋಪ

Date:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳ್ಳತನದ ಅಭ್ಯಾಸವಿದೆ. ಮತ ಕಳ್ಳತನ, ಹಣ ಕಳ್ಳತನ, ಬ್ಯಾಂಕ್‌ಗಳನ್ನು ಲೂಟಿ ಮಾಡುವವರನ್ನು ರಕ್ಷಿಸುವುದು ಅವರ ಅಭ್ಯಾಸವಾಗಿದೆ. ಪ್ರಧಾನಿ ಮೋದಿ ಮತ ಕಳ್ಳತನ ಮಾಡುವ ಮೂಲಕ ಬಿಹಾರ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರೋಪಿಸಿದರು.

- Advertisement -

ಬಿಹಾರ ಚುನಾವಣೆಗೂ ಮುಂಚಿತವಾಗಿ ರಾಹುಲ್ ಗಾಂಧಿ ಮತ್ತು ಇತರ ಮಹಾಘಟಬಂಧನ ನಾಯಕರ ನೇತೃತ್ವದಲ್ಲಿ ಮತ ಕಳ್ಳತನದ ವಿರುದ್ಧವಾಗಿ ಮತ ಅಧಿಕಾರ ಯಾತ್ರೆ ನಡೆಸಲಾಗುತ್ತಿದ್ದು ಕೊನೆಯ ದಿನ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. “ಈ ಮತದಾರರ ಅಧಿಕಾರ ಯಾತ್ರೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯಿತು. ಅದನ್ನು ಅಡ್ಡಿಪಡಿಸುವ ಪ್ರಯತ್ನಗಳು ನಡೆದವು ಆದರೆ ಬಿಹಾರದ ಜನರು ಮತ್ತು ಮಹಾಘಟಬಂಧನ ಜನರು ಹಿಂದೆ ಸರಿಯಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? SIR ಮೂಲಕ ಬಿಹಾರ ಚುನಾವಣೆಯಲ್ಲಿ ಮತ ಕಳವು ನಡೆಸುವ ಪಿತೂರಿ ಯಶಸ್ಸಾಗಲು ಬಿಡಲ್ಲ: ರಾಹುಲ್ ಗಾಂಧಿ

“ಪ್ರಧಾನಿ ಮೋದಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ, ಜಾಗರೂಕರಾಗಿರಿ. ನೀವು ಎಚ್ಚರವಾಗಿಲ್ಲದಿದ್ದರೆ, ಮೋದಿ ಮತ್ತು ಶಾ ನಿಮ್ಮನ್ನು ನಿಗ್ರಹಿಸುತ್ತಾರೆ. ಬಡವರು, ಹಿಂದುಳಿದವರು ಮತ್ತು ದಲಿತರ ಹೊಸ ಸರ್ಕಾರ ರಚನೆಯಾಗುವುದರೊಂದಿಗೆ ಎನ್‌ಡಿಎಯ ಡಬಲ್ ಎಂಜಿನ್ ಸರ್ಕಾರ ಶೀಘ್ರದಲ್ಲೇ ಅಧಿಕಾರದಿಂದ ಕೆಳಗಿಳಿಯಲಿದೆ” ಎಂದು ಪ್ರತಿಪಾದಿಸಿದರು.

ಹಾಗೆಯೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡ ಅವರು, “ಒಂದು ಕಾಲದಲ್ಲಿ ಸಮಾಜವಾದದ ಬಗ್ಗೆ ಮಾತನಾಡುತ್ತಿದ್ದರು. ಆದರೆ ಈಗ ಅವರು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಆರ್‌ಎಸ್‌ಎಸ್-ಬಿಜೆಪಿ ಕುಮಾರ್ ಅವರನ್ನು ಕೈಬಿಡುತ್ತದೆ” ಎಂದು ಅಭಿಪ್ರಾಯಿಸಿದರು.

“ಈ ಡಬಲ್ ಎಂಜಿನ್ ಸರ್ಕಾರ ಕೆಲವು ತಿಂಗಳುಗಳ ನಂತರ ಇರುವುದಿಲ್ಲ. ರಚನೆಯಾಗುವ ಹೊಸ ಸರ್ಕಾರ ಬಡವರು, ಮಹಿಳೆಯರು, ದಲಿತರು ಮತ್ತು ಹಿಂದುಳಿದವರದ್ದಾಗಿರುತ್ತದೆ” ಎಂದೂ ಹೇಳಿದರು.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ವಿಕಾಸಶೀಲ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ, ಸಿಪಿಐ (ಎಂಎಲ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಸಿಪಿಐನ ಆನಿ ರಾಜ, ಟಿಎಂಸಿ ಸಂಸದ ಯೂಸುಫ್ ಪಠಾಣ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮತ್ತು ಇತರ ಇಂಡಿಯಾ ಒಕ್ಕೂಟದ ನಾಯಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...