ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು
ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

“ಇತ್ತೀಚಿನ ಮೋದಿ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ” ಎಂದರು

Advertisements

“ಧೃವೀಕರಣ ಮಾಡುವ ಪ್ರಯತ್ನ ಸಂವಿಧಾನದ 15 ಮತ್ತು 16 ನೇ ಕಲಂ ನಲ್ಲಿ ಸ್ಪಷ್ಟವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಹೇಳಲಾಗಿದೆ. ಅದರಲ್ಲಿ ಹಿಂದೂಗಳು ಹಾಗೂ ಮುಸಲ್ಮಾನರು, ಕ್ರಿಶ್ಚಿಯನ್ ಹಾಗೂ ಎಲ್ಲಾ ಜನರೂ ಬರುತ್ತಾರೆ. ಮುಸಲ್ಮಾನರಿಗೆ ಮೀಸಲಾತಿ ಕೊಡಲಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅವರು ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಹಿಂದೂಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಒಬ್ಬ ಪ್ರಧಾನಮಂತ್ರಿಯಾಗಿ ಈ ರೀತಿ ಮಾತುಗಳನ್ನಾಡುವುದು ಅವರ ಸ್ಥಾನಕ್ಕೆ ಚ್ಯುತಿ ತರುವ ಕೆಲಸ” ಎಂದು ಟೀಕಿಸಿದರು.

“1977ನಲ್ಲಿಯೇ ಹಾವನೂರು ಆಯೋಗ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಬೇಕೆಂದು ಶಿಫಾರಸ್ಸು ಮಾಡಿದೆ. ಚಿನ್ನಪ್ಪ ರೆಡ್ಡಿ ಆಯೋಗವೂ ಇದನ್ನೇ ಶಿಫಾರಸು ಮಾಡಿದೆ. 2004 ನಲ್ಲಿ ಕರ್ನಾಟಕದಲ್ಲಿ ಮುಸಲ್ಮಾನರಿಗೆ ಮೀಸಲಾತಿಯನ್ನು 2 ಬಿ ಅಡಿಯಲ್ಲಿ ಪ್ರಾರಂಭಿಸಲಾಯಿತು. 4% ಮೀಸಲಾತಿಯನ್ನು ಕೊಡಲು ಪ್ರಾರಂಭಿಸಲಾಯಿತು. 94ರಿಂದ ಈವರೆಗೆ ಮೀಸಲಾತಿ ಹಾಗೆ ಉಳಿದುಕೊಂಡು ಬಂದಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಸಲ್ಮಾನರ 4% ಮೀಸಲಾತಿಯನ್ನು ತೆಗೆದುಹಾಕಿದರು. ಅದರ ವಿರುದ್ಧ ಮುಸಲ್ಮಾನ ಮುಖಂಡರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿ, ಬಿಜೆಪಿಯವರು ಅಫೊಡವಿಟ್ ಹಾಕಿ ಯಥಾಸ್ಥಿತಿ ಮುಂದುವರೆಸುತ್ತೇವೆ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ” ಎಂದರು.

“ನರೇಂದ್ರ ಮೋದಿಯವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಅವರೇ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು. ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ಪ್ರವೀಣರು” ಎಂದು ಕುಟುಕಿದರು.

“ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಬರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ” ಎಂದು ವಿವರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X