ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗಳಿಗೆ ಮೋದಿ ಇದುವರೆಗೂ ಉತ್ತರಿಸಿಲ್ಲ: ಕಾಂಗ್ರೆಸ್‌

Date:

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಸಂಬಂಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನೂ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಅದಾನಿ ಮತ್ತು ಪ್ರಧಾನಿ ನಡುವಿನ ಸಂಬಂಧದ ಕುರಿತು ರಾಹುಲ್‌ ಗಾಂಧಿ ಅವರು ಕೇಳಿದ ಪ್ರಶ್ನೆಗಳಿಗೆ ಇದುವರೆಗೂ ಮೋದಿ ಉತ್ತರಿಸಿಲ್ಲ. ಉತ್ತರಿಸುವ ಬದಲಾಗಿ ಅನರ್ಹತೆಯ ಅಸ್ತ್ರ ಪ್ರಯೋಗಿಸಿದ್ದಾರೆ” ಎಂದು ಆರೋಪಿಸಿದೆ.

“ಪ್ರಶ್ನೆಗಳನ್ನು ಹತ್ತಿಕ್ಕುವ ಆಡಳಿತವನ್ನು ಪ್ರಜಾಪ್ರಭುತ್ವ ಎನ್ನುವುದಿಲ್ಲ, ಸರ್ವಧಿಕಾರ ಎನ್ನುತ್ತಾರೆ. ಸರ್ವಧಿಕಾರಿಗಳೆಲ್ಲರೂ ದುರಂತ ಅಂತ್ಯ ಕಂಡಿರುವುದು ಇತಿಹಾಸದಲ್ಲಿದೆ” ಎಂದು ಕಾಂಗ್ರೆಸ್‌ ಕಿಡಿ ಕಾರಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅದಾನಿ ಹಗರಣವನ್ನು ಪ್ರಶ್ನಿಸಿದ ಒಂದೇ ಕಾರಣಕ್ಕೆ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲು ಷಡ್ಯಂತ್ರ ರೂಪಿಸಿದ ಕೇಂದ್ರ ಸರ್ಕಾರ ಅಕ್ಷರಶಃ ದ್ವೇಷ ರಾಜಕಾರಣದ ಪರಮಾವಧಿಗೆ ತಲುಪಿದೆ. ಈ ದೇಶದಲ್ಲಿ ಭ್ರಷ್ಟಾಚಾರವನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎನ್ನುವುದೇ ಸರ್ವಾಧಿಕಾರಿಯ ಉದ್ದೇಶವೇ” ಎಂದು ಪ್ರಶ್ನಿಸಿದೆ.

ಈ ಸುದ್ದಿ ಓದಿದ್ದೀರಾ? ಅಕ್ರಮ ಗಣಿಗಾರಿಕೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ದ ಎಫ್‌ಐಆರ್

“ಭಾರತವನ್ನು ವಿಭಜಿಸಿ ಆಳುವವರು ಭಾರತವನ್ನು ಜೋಡಿಸುವ ನಾಯಕನನ್ನು, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯನ್ನು ಹಂಚಲು ಹೊರಟ ನಾಯಕನನ್ನು ಹೇಗೆ ಸಹಿಸಬಲ್ಲರು? ದ್ವೇಷದ ವ್ಯಾಪಾರಿಗಳಿಗೆ ರಾಹುಲ್ ಗಾಂಧಿ ನುಂಗಲಾರದ ತುತ್ತಾಗಿದ್ದಾರೆ. ಈ ಕಾರಣಕ್ಕಾಗಿಯೇ ಅನರ್ಹತೆ ಎಂಬ ಅಸ್ತ್ರ ಪ್ರಯೋಗಿಸಿದ್ದಾರೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ...