ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

Date:

Advertisements

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ. ಹಾಗೆಯೇ ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಹೇಳಿದರು.

ಎಸ್‌ಟಿ-ಮೀಸಲಾತಿ ವಲ್ಸಾದ್ ಲೋಕಸಭಾ ಸ್ಥಾನದ ಕಾಂಗ್ರೆಸ್ ಅಭ್ಯರ್ಥಿ ಅನಂತ್ ಪಟೇಲ್ ಅವರನ್ನು ಬೆಂಬಲಿಸಿ ಬುಡಕಟ್ಟು ಪ್ರಾಬಲ್ಯದ ವಲ್ಸಾದ್ ಜಿಲ್ಲೆಯ ಧರಮ್‌ಪುರ ಗ್ರಾಮದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಪ್ರಿಯಾಂಕಾ ಗಾಂಧಿ ಮಾತನಾಡಿದರು.

“ಬಿಜೆಪಿ ನಾಯಕರು ಮತ್ತು ಅಭ್ಯರ್ಥಿಗಳು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅದನ್ನು ನಿರಾಕರಿಸುತ್ತಿದ್ದಾರೆ. ಇದು ಅವರ ಚುನಾವಣಾ ತಂತ್ರವಲ್ಲದೇ ಮತ್ತೆ ಏನೂ ಅಲ್ಲ” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ?  ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

“ಮೊದಲನೆಯದಾಗಿ, ಅವರು ನಾವು ಯಾವುದನ್ನೂ ಮಾಡುವುದಿಲ್ಲ ಎಂದು ನಿರಂತರವಾಗಿ ನಿರಾಕರಿಸುತ್ತಾ ಇರುತ್ತಾರೋ ಅದನ್ನೇ ತಾವು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡುತ್ತಾರೆ. ಸಾಮಾನ್ಯ ಜನರನ್ನು ದುರ್ಬಲಗೊಳಿಸಲು ಮತ್ತು ನಮ್ಮ ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಕಸಿದುಕೊಳ್ಳಲು ಅವರು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಾರೆ” ಎಂದು ಕಾಂಗ್ರೆಸ್ ನಾಯಕಿ ಆರೋಪಿಸಿದರು.

ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು, “ಪಿಎಂ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಸೂಪರ್ ಮ್ಯಾನ್ ಆಗಿ ವೇದಿಕೆಗೆ ಆಗಮಿಸುತ್ತಾರೆ. ಆದರೆ ನೀವು ಪಿಎಂ ಮೋದಿ ಅವರು ದುಬಾರಿ ಮ್ಯಾನ್ ಅನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಲೇವಡಿ ಮಾಡಿದರು.

“ಬಿಜೆಪಿ ನಾಯಕರು ಪ್ರಧಾನಿಯನ್ನು ಶಕ್ತಿಶಾಲಿ ಎಂದು ಬಿಂಬಿಸುತ್ತಾರೆ ಮತ್ತು ಅವರು ಚಿಟಿಕೆ ಹೊಡೆದು ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು ಎಂದು ಹೇಳುತ್ತಾರೆ. ಹಾಗಿರುವಾಗ ಬಡತನವನ್ನು ಹೋಗಲಾಡಿಸಲು ಮೋದಿ ಅವರಿಂದ ಏಕೆ ಸಾಧ್ಯವಾಗುತ್ತಿಲ್ಲ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ?  Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

“ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಮತ್ತು ದೇಶದಲ್ಲಿ ಬುಡಕಟ್ಟು ಜನರು ಹಣದುಬ್ಬರ, ನಿರುದ್ಯೋಗ ಏರುತ್ತಿದೆ. ಸಂಭಾವನೆ ಕಡಿಮೆಯಾಗುತ್ತಿದೆ, ಬುಡಕಟ್ಟು ಜನರ ಭೂಮಿ ನಷ್ಟವಾಗುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಇತರ ದೌರ್ಜನ್ಯಗಳಂತಹ ಸಮಸ್ಯೆಗಳಿಂದ ಬುಡಕಟ್ಟು ಜನರ ಬಳಲುತ್ತಿದೆ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಇನ್ನು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಪ್ರಸ್ತಾಪಿಸಿ ಮಾತನಾಡಿದ ಅವರು, “ಇದು ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತದೆ. ನಮ್ಮ ಪಕ್ಷವು ನಗರ ಪ್ರದೇಶಗಳಿಗೆ ಎಂಜಿಎನ್‌ಆರ್‌ಇಜಿಎ ತರಹದ ಯೋಜನೆಯನ್ನು ತರುತ್ತದೆ. ಕುಟುಂಬಸ್ಥರಿಗೆ 100 ದಿನಗಳ ಖಾತರಿಯ ಕೆಲಸ ಸಿಗುತ್ತದೆ” ಎಂದರು.

ವಲ್ಸಾದ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನಂತ್ ಪಟೇಲ್ ವಿರುದ್ಧ ಬಿಜೆಪಿ ಧವಲ್ ಪಟೇಲ್ ಅವರನ್ನು ಕಣಕ್ಕಿಳಿಸಿದೆ. ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. 2014 ಮತ್ತು 2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಗದ್ದುಗೆಯನ್ನು ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X