ಮೋದಿ ಅಮೆರಿಕ ಭೇಟಿ: ಮಾನವ ಹಕ್ಕುಗಳ ಕಾರ್ಯಕರ್ತರಿಂದ ಪ್ರತಿಭಟನೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಒಂಬತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರನ್ನು ಭೇಟಿ ಮಾಡುವ ಈ ಸಮಯದಲ್ಲೇ ಹಲವೆಡೆ ಮಾನವ ಹಕ್ಕು ಗಳ ಕಾರ್ಯಕರ್ತರ ಗುಂಪುಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.  

ಹಲವು ನಿರೀಕ್ಷೆ ಮತ್ತು ಉತ್ಸಾಹದ ನಡುವೆ ಜೂನ್‌ 21 ರಂದು ಸಂಜೆ ವಾಷಿಂಗ್ಟನ್‌ಗೆ ಬಂದಿಳಿಯುತ್ತಿದ್ದಂತೆ ಭಾರತೀಯ ಅಮೆರಿಕನ್ನರ ಒಂದು ಗುಂಪು ಮೋದಿಯವರನ್ನು ಸ್ವಾಗತಿಸಿದರೆ, ಮತ್ತೊಂದು ಗುಂಪು ಭಾರತದಲ್ಲಿ ಹದಗೆಡುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದೆ.

ಸ್ವತಂತ್ರ ಪತ್ರಕರ್ತ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್ ಅವರು ಮೋದಿಯನ್ನು “ಪೂರ್ವದಲ್ಲಿ ಉದಯಿಸಿದ ಹಿಟ್ಲರ್. ಮೋದಿಯ ಫ್ಯಾಸಿಸಂ ಅನ್ನು ಸಕ್ರಿಯಗೊಳಿಸುವುದನ್ನು ಜೋ ಬೈಡನ್ ಅವರು ತಡೆಯಬೇಕು ಎಂದು ಮನವಿ ಮಾಡಿರುವುದರ ಜೊತೆಗೆ ಮೋದಿಯವರಿಗೆ ಸ್ವಾಗತವಿಲ್ಲ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

Advertisements

ಅವರ ಹಿಂದಿನ ಟ್ವೀಟ್‌ಗಳನ್ನು ಗಮನಿಸುವುದಾದರೆ, ಭಾರತದಲ್ಲಿ ನರಮೇಧಕ್ಕೆ ಕಾರಣವಾದ ಮೋದಿಯ ವಿರುದ್ಧ ಒಗ್ಗಟ್ಟನ್ನು ತೋರಿಸಲು ಮತ್ತು ಫ್ಯಾಸಿಸಂ ವಿರುದ್ಧ ಅಭಿವ್ಯಕ್ತಪಡಿಸಲು ಅಮೆರಿಕದ ಜನರನ್ನು ಆಹ್ವಾನಿಸಿದ್ದಾರೆ. ಟ್ವಿಟರ್‌ನಲ್ಲಿ ಹಲವು ಬಳಕೆದಾರರು ಅವರ ಟ್ವೀಟ್ ಮತ್ತು ಹ್ಯಾಶ್‌ಟ್ಯಾಗ್ ಅನ್ನು ಮರುಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತ ಎಂದ ವಿಶ್ವ ಆರೋಗ್ಯ ಸಂಸ್ಥೆ

ರಾಯಿಟರ್ಸ್ ವರದಿಯ ಪ್ರಕಾರ, ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್, ಪೀಸ್ ಆಕ್ಷನ್, ವೆಟರನ್ಸ್ ಫಾರ್ ಪೀಸ್ ಅಂಡ್ ಬೆಥೆಸ್ಡಾ ಆಫ್ರಿಕನ್ ಸಿಮೆಂಟರಿ ಒಕ್ಕೂಟವು ಜೂನ್ 22 ರಂದು ಮೋದಿ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಲಿರುವಾಗ ಶ್ವೇತಭವನದ ಬಳಿ ಪ್ರತಿಭಟಿಸಲು ನಿರ್ಧರಿಸಿದೆ.

ಏತನ್ಮಧ್ಯೆ, ಎರಡು ಮಾನವ ಹಕ್ಕುಗಳ ಗುಂಪುಗಳಾದ – ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಮತ್ತು ಹ್ಯೂಮನ್ ರೈಟ್ಸ್ ವಾಚ್ ವಾಷಿಂಗ್ಟನ್‌ನಲ್ಲಿ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಸ್ಟ್’ ಪ್ರದರ್ಶನವನ್ನು ಆಯೋಜಿಸಿದೆ.

ಭಾರತ ಸರ್ಕಾರವು ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು ಮತ್ತು ಎರಡು ಭಾಗಗಳ ಸರಣಿಗೆ ಲಿಂಕ್‌ಗಳನ್ನು ಹಂಚಿಕೊಳ್ಳುವ ಬಹುತೇಕ ಯೂಟ್ಯೂಬ್ ವಿಡಿಯೋಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರವು ನಿರ್ದೇಶನಗಳನ್ನು ನೀಡಿತ್ತು. ತರುವಾಯ, ಆದಾಯ ತೆರಿಗೆ ಇಲಾಖೆಯು ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಸುಮಾರು ನಾಲ್ಕು ದಿನಗಳ ಕಾಲ ಕಾರ್ಯಾಚರಣೆಯನ್ನು ನಡೆಸಿತ್ತು.

ಶ್ವೇತಭವನವು ಪ್ರಧಾನಿ ಮೋದಿಗೆ ಆತಿಥ್ಯ ನೀಡುವುದಾಗಿ ಘೋಷಿಸಿದಾಗ, ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಅವರು ಈ ಭೇಟಿಯು, ಮುಕ್ತ, ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್ ಗಾಗಿ ಬದ್ಧತೆ ಮತ್ತು ರಕ್ಷಣೆ ಸೇರಿದಂತೆ ಹಲವು ವಿಷಯಗಳಲ್ಲಿ ದೇಶಗಳು ಒಪ್ಪಂದ ಮಾಡಿಕೊಳ್ಳಲಿವೆ. ಅಲ್ಲದೇ, ಶುದ್ಧ ಇಂಧನ ಮತ್ತು ಬಾಹ್ಯಾಕಾಶ ಸಂಬಂಧಿಸಿದಂತೆಯೂ ಮಾತುಕತೆ ನಡೆಯಲಿದೆ. ಅಮೆರಿಕಕ್ಕೆ ಪ್ರಧಾನಿ ಮೋದಿ ಅವರ ಭೇಟಿಯು ಎರಡು ರಾಷ್ಟ್ರಗಳ ನಿಕಟ ಸಂಬಂಧವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದು ಅಮೆರಿಕನ್ನರು ಮತ್ತು ಭಾರತೀಯರನ್ನು ಒಟ್ಟಿಗೆ ಜೋಡಿಸುವ ಕುಟುಂಬ ಮತ್ತು ಸ್ನೇಹದ ಬಂಧಗಳನ್ನು ತೋರಿಸುತ್ತದೆ” ಎಂದು ತಿಳಿಸಿದ್ದರು.

WhatsApp Image 2023 06 21 at 15.17.54

ಇದೇ ಸಂದರ್ಭದಲ್ಲಿ ಭಾರತದಲ್ಲಿನ ಪ್ರಜಾಪ್ರಭುತ್ವದ ಅವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಕಳವಳ ವ್ಯಕ್ತಪಡಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌ಗೆ ಅಮೆರಿಕದ 70ಕ್ಕೂ ಹೆಚ್ಚು ಸೆನೆಟರ್‌ಗಳು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಭೇಟಿಗಾಗಿ ವಾಷಿಂಗ್ಟನ್ ಡಿಸಿಗೆ ಆಗಮಿಸುವ ಮುನ್ನಾ ದಿನದಂದು ಶಾಸಕರು ಪತ್ರ ಬರೆದು ಒತ್ತಾಯಿಸಿದ್ದಾರೆ.

ನ್ಯೂಯಾರ್ಕ್‌ಗೆ ಆಗಮಿಸಿ ಖಾಸಗಿ ಸಭೆಗಳನ್ನು ನಡೆಸಿದ ನಂತರ, ಅಂತರರಾಷ್ಟ್ರೀಯ ಯೋಗ ದಿನವನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹುಲ್ಲು ಹಾಸಿನ ಮೇಲೆ ಆಚರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಸಿಸಾಬಾ ಕೊರೊಸಿ, ಉಪ ಪ್ರಧಾನ ಕಾರ್ಯದರ್ಶಿ ಅಮಿನಾ ಮೊಹಮ್ಮದ್ ಮತ್ತು ಇತರ ಅನೇಕ ರಾಜತಾಂತ್ರಿಕರು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X