ಕಾಂಗ್ರೆಸ್ ಪ್ರಣಾಳಿಕೆ| ಜನರ ದಾರಿ ತಪ್ಪಿಸುತ್ತಿರುವ ‘ಸುಳ್ಳುಗಳ ಸರದಾರ’ ಮೋದಿ: ಖರ್ಗೆ ಟೀಕೆ

Date:

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು “ಸುಳ್ಳುಗಳ ಸರದಾರ” ಎಂದು ಕರೆದಿದ್ದಾರೆ.

- Advertisement -

ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರವನ್ನು ನಡೆಸಿದ ಮಾತನಾಡಿದ ಖರ್ಗೆ, “ಕಾಂಗ್ರೆಸ್ ಸಂಪತ್ತನ್ನು ಮರುಹಂಚಿಕೆ ಮಾಡಲು ಮತ್ತು ಮಹಿಳೆಯರ ಮಂಗಳಸೂತ್ರಗಳನ್ನು ಕಿತ್ತುಕೊಳ್ಳಲು ಯೋಜಿಸುತ್ತಿದೆ ಎಂದು ಮೋದಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಎಲ್ಲಾ ಆಸ್ತಿಯನ್ನು ಕಿತ್ತುಕೊಳ್ಳುತ್ತದೆ ಎಂದು ಮೋದಿ ಹೇಳಿದ್ದಾರೆ. ಆದರೆ ನಾವು ಎಂದಿಗೂ ಈ ಮಾತುಗಳನ್ನು ಹೇಳಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಅಪಪ್ರಚಾರ: ಬಟಾ ಬಯಲಾಯ್ತು ಬಿಜೆಪಿ ಪಿತೂರಿ! Congress Manifesto

“ಓರ್ವ ಪ್ರಧಾನಿಯಾಗಿ ಈ ರೀತಿ ಸುಳ್ಳುಗಳನ್ನು ಹೇಳಿದರೆ ನಾವು ಏನೆಂದು ಹೇಳುವುದು? ಈ ರೀತಿ ಮಾತನಾಡುವವರಿಗೆ ಮತ್ತೆ ನಾವು ಮತವನ್ನು ನೀಡಬೇಕೆ” ಎಂದು ಪ್ರಶ್ನಿಸಿದ್ದು, “ಈ ರೀತಿ ಸುಳ್ಳು ಹೇಳಿಕೊಂಡೇ ತಿರುಗಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳುಗಳ ಸರದಾರ” ಎಂದು ಲೇವಡಿ ಮಾಡಿದರು.

“ಇಂಡಿಯಾ ಮೈತ್ರಿಕೂಟವು ಜಾತಿ ಗಣತಿ ಆರಂಭಿಸುವ ಭರವಸೆಯನ್ನು ನೀಡತ್ತದೆ. ಇದು ಸಾರ್ವಜನಿಕರ ಒಳಿತಿಗಾಗಿ ಮಾಡುವುದೇ ಹೊರತು ಯಾರ ಆಸ್ತಿಯನ್ನು ಕೂಡಾ ಕಿತ್ತುಕೊಳ್ಳಲು ಅಲ್ಲ. ಪ್ರಸ್ತುತ ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧವಾಗಿ ಕಾಂಗ್ರೆಸ್‌ನ ಹೋರಾಟ ಇದಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

ಅಂಬಾಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವರುಣ್ ಚೌಧರಿ ಮತ್ತು ಎಎಪಿಯ ಕುರುಕ್ಷೇತ್ರದ ಅಭ್ಯರ್ಥಿ ಸುಶೀಲ್ ಗುಪ್ತಾ ಈ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹರಿಯಾಣದಲ್ಲಿ ಕಾಂಗ್ರೆಸ್ ಒಟ್ಟು ಒಂಬತ್ತು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಇಂಡಿಯಾ ಒಕ್ಕೂಟದ ಆಮ್‌ ಆದ್ಮಿ ಪಕ್ಷ (ಎಎಪಿ) ಕುರುಕ್ಷೇತ್ರದಲ್ಲಿ ಕಣದಲ್ಲಿದೆ. ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...