ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಮಿಜೋರಾಂನ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್‌ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾರೆ. ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂಬುದು ನನಗೆ ನಿಜವಾಗಿಯೂ ಆಶ್ಚರ್ಯಕರವಾಗಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜೂನ್‌ನಲ್ಲಿ ತಮ್ಮ ಮಣಿಪುರ ಭೇಟಿಯನ್ನು ಪ್ರಸ್ತಾಪಿಸಿ, “ಮಣಿಪುರದ ಕಲ್ಪನೆಯನ್ನು ಬಿಜೆಪಿ ನಾಶಪಡಿಸಿದೆ. ಇದು ಇನ್ನು ಮುಂದೆ ಒಂದು ರಾಜ್ಯವಲ್ಲ, ಈಗ ಎರಡು ರಾಜ್ಯವಾಗಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಘರ್ಷ ಭುಗಿಲೆದ್ದಿದೆ” ಎಂದು ತಿಳಿಸಿದ್ದಾರೆ.
“ಜನರನ್ನು ಹತ್ಯೆ ಮಾಡಲಾಗಿದೆ. ಮಹಿಳೆಯರಿಗೆ ಕಿರುಕುಳ ನೀಡಲಾಗಿದೆ ಮತ್ತು ಶಿಶುಗಳನ್ನು ಕೊಲ್ಲಲಾಗಿದೆ. ಆದರೆ ಪ್ರಧಾನಿಗೆ ಅಲ್ಲಿ ಪ್ರಯಾಣಿಸುವುದು ಮುಖ್ಯವಲ್ಲ ಎಂದು ರಾಹುಲ್ ಹೇಳಿದರು.
LIVE: Chanmari to Raj Bhawan | Aizawl, Mizoram | Bharat Jodo Yatra https://t.co/7gMOvxi0ny
— Rahul Gandhi (@RahulGandhi) October 16, 2023
“ಮೇ ತಿಂಗಳಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಭಾರತದ ಕಲ್ಪನೆಯು ಆಕ್ರಮಣದಲ್ಲಿದೆ ಮತ್ತು ದೇಶದ ಜನರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ರಾಹುಲ್ ಅವರು ಹೇಳಿದರು.
ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ
“ಮಣಿಪುರದಲ್ಲಿ ನಡೆದಿರುವುದು ಭಾರತದ ಕಲ್ಪನೆಯ ಮೇಲಿನ ದಾಳಿಯಾಗಿದೆ. ಕಾಂಗ್ರೆಸ್ ಹಮ್ಮಿಕೊಂಡ ಭಾರತ್ ಜೋಡೋ ಯಾತ್ರೆಯು ಈ ದೇಶದ ಪ್ರತಿಯೊಂದು ಧರ್ಮ, ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯವನ್ನು ರಕ್ಷಿಸುವ ಯಾತ್ರೆಯಾಗಿತ್ತು ಎಂದರು.
ಕಾಂಗ್ರೆಸ್ ನಾಯಕ ಸೋಮವಾರ ಮಿಜೋರಾಂನ ಐಜ್ವಾಲ್‌ನಲ್ಲಿ ಚನ್ಮರಿ ಜಂಕ್ಷನ್‌ನಿಂದ ರಾಜಭವನದವರೆಗೆ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಪಾದಯಾತ್ರೆ ನಡೆಸಿದರು.
ರಾಹುಲ್ ಎರಡು ದಿನಗಳ ಭೇಟಿಗಾಗಿ ಮಿಜೋರಾಂನಲ್ಲಿದ್ದಾರೆ. 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ.