ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ನೆಲೆಸಲಿರುವ ಪ್ರಧಾನಿ: ಲಾಲು ಪ್ರಸಾದ್‌ ಯಾದವ್

Date:

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ನೆಲೆಸಲು ಈಗಲೇ ಯೋಜಿಸುತ್ತಿದ್ದಾರೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಟೀಕಿಸಿದರು.

- Advertisement -

ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಪ್ರಧಾನಿಯವರು ಭಾರತ ತೊರೆಯಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು ಪದೇ ಪದೇ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ತಾವು ಯಾವ ದೇಶದಲ್ಲಿ ಸುಖವಾಗಿರಬಹುದು, ತಮ್ಮ ಇಷ್ಟದ ಪಿಜ್ಜಾ, ಮೊಮೋಸ್ ಹಾಗೂ ಚೌ ಮೇನ್ ಅನ್ನು ಎಲ್ಲಿ ಆನಂದವಾಗಿ ಸವಿಯಬಹುದು ಎಂಬುದಕ್ಕೆ ಸೂಕ್ತವಾದ ಸ್ಥಳ ಹುಡುಕುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್‌ ಯಾದವ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮ್ಮ ಹಿರಿಯ ಪುತ್ರ ಅವರೊಂದಿಗೆ ಬಿಹಾರದ ಸಚಿವ ತೇಜ್ ಪ್ರತಾಪ್ ಯಾದವ್ ಆಯೋಜಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಮುಂಬೈ | ಐಐಟಿ ಸಂಸ್ಥೆಯ ಕ್ಯಾಂಟೀನ್‌ ಗೋಡೆಗಳ ಮೇಲೆ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್

ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ “ಇಂಡಿಯಾ” ಒಕ್ಕೂಟದ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಲಾಲು ಪ್ರಸಾದ್ ತಿಳಿಸಿದ್ದಾರೆ.

ನರೇಂದ್ರ ಮೋದಿಯವರು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಪಕ್ಷ ಒಗ್ಗಟ್ಟನ್ನು ಉಳಿಸಿಕೊಂಡು ಬಿಜೆಪಿಯನ್ನು ಸೋಲಿಸಬೇಕು. ಪ್ರಧಾನಿಯ ಪ್ರಯತ್ನವನ್ನು ವಿಫಲಗೊಳಿಬೇಕು ಎಂದು ಹೇಳಿದ ಲಾಲು ಪ್ರಸಾದ್‌ ಯಾದವ್‌, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ವಿಪಕ್ಷಗಳು ಸೇರಿ ರಚಿಸಿಕೊಂಡಿರುವ ಒಕ್ಕೂಟವು ಭ್ರಷ್ಟಾಚಾರ, ಸ್ವಜನಪಕ್ಷಪಾತದ ಮೂಲಕ ರಾಜಕೀಯ ಮಾಡುತ್ತಿದೆ ಎಂದಿದ್ದ ಪ್ರಧಾನಿ ಮೋದಿ, ‘ಇಂಡಿಯಾ’ ಒಕ್ಕೂಟವನ್ನು ಈಸ್ಟ್ ಇಂಡಿಯಾ ಕಂಪನಿ ಹಾಗೂ ಕೆಲವು ನಿಷೇಧಿತ ಸಂಸ್ಥೆಗಳಿಗೆ ಹೋಲಿಸಿ ಟೀಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...