ಕತಾರ್‌ನಲ್ಲಿ ಬಂಧಿತರಾಗಿದ್ದವರ ಬಿಡುಗಡೆಗೆ ನಟ ಶಾರೂಖ್ ಖಾನ್ ಕಾರಣ: ಚರ್ಚೆಗೆ ಗ್ರಾಸವಾದ ಸುಬ್ರಮಣಿಯನ್ ಸ್ವಾಮಿ ಟ್ವೀಟ್

Date:

Advertisements

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಕತಾರ್ ದೇಶಗಳ ಪ್ರವಾಸಕ್ಕೆ ತೆರಳಿರುವ ಮಧ್ಯೆಯೇ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್‌ವೊಂದು, ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತಮ್ಮ ಎರಡು ದಿನದ ಭೇಟಿಯ ಬಗ್ಗೆ ಇಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‌ನಲ್ಲಿ ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ. ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧವನ್ನು ಸದೃಢಗೊಳಿಸಲಿದೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಯುಎಇಗೆ ಇದು ನನ್ನ 7ನೇ ಭೇಟಿಯಾಗಿದೆ. ಕತಾರ್‌ನ ಅಮೀರ್ ತಮೀಮ್ ಬಿನ್ ಹಮದ್ ಅವರನ್ನೂ ಕೂಡ ಭೇಟಿ ಮಾಡಲಿದ್ದೇನೆ” ಎಂದು ಎಲ್ಲ ವಿವರಗಳನ್ನು ಹಂಚಿಕೊಂಡಿದ್ದರು.

ಈ ಟ್ವೀಟ್‌ಗೆ ಉತ್ತರಿಸಿರುವ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, “ಪ್ರಧಾನಿ ಮೋದಿಯವರು ಕತಾರ್‌ನ ಅಮೀರ್ ಅವರ ಭೇಟಿ ಮಾಡುವ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಕೂಡ ಜೊತೆಗೆ ಕರೆದುಕೊಂಡು ಹೋಗಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಇದಕ್ಕೆ ಕಾರಣ ವಿವರಿಸಿರುವ ಸುಬ್ರಮಣಿಯನ್ ಸ್ವಾಮಿ, “ಕತಾರ್‌ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಸಂಸ್ಥೆಯ ಅಧಿಕಾರಿಗಳು ಕತಾರ್‌ ಶೇಖ್‌ಗಳ ಮನವೊಪ್ಪಿಸುವಲ್ಲಿ ವಿಫಲರಾಗಿದ್ದರು. ಆ ಬಳಿಕ ಕತಾರ್‌ ಶೇಖ್‌ಗಳ ಜೊತೆಗೆ ಮಾತುಕತೆ ನಡೆಸುವಂತೆ ಮೋದಿಯವರು ಶಾರೂಖ್ ಖಾನ್ ಅವರಲ್ಲಿ ಕೇಳಿಕೊಂಡಿದ್ದರು. ಶಾರೂಖ್ ಖಾನ್ ಅವರ ಮಾತುಕತೆಯ ಫಲವಾಗಿ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಹಾಗಾಗಿ, ಕತಾರ್‌ ಅಮೀರ್‌ ಅವರ ಭೇಟಿಯ ವೇಳೆ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಕೂಡ ಜೊತೆಗೆ ಕರೆದುಕೊಂಡು ಹೋಗಿ” ಎಂದು ಆಗ್ರಹಿಸಿದ್ದಾರೆ.

ಈ ಟ್ವೀಟ್ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬಗ್ಗೆ ನಟ ಶಾರೂಖ್ ಖಾನ್ ಆಗಲೀ, ವಿದೇಶಾಂಗ ವ್ಯವಹಾರಗಳ ಸಚಿವಾಲಯವಾಗಲೀ ಯಾವುದೇ ಹೇಳಿಕೆ ನೀಡಿಲ್ಲ.

ಸುಬ್ರಮಣಿಯನ್ ಸ್ವಾಮಿಯವರು ನೀಡಿದ ಈ ಹೇಳಿಕೆಯ ಬೆನ್ನಲ್ಲೇ ನಟ ಶಾರೂಖ್ ಖಾನ್ ಕತಾರ್ ಶೇಖ್‌ಗಳ ಜೊತೆಗೆ ಓಡಾಡಿರುವ ಫೋಟೋಗಳು ಕೂಡ ಹರಿದಾಡಿದ್ದು, ವೈರಲ್ ಆಗಿದೆ.

ಮೋದಿ ಧನ್ಯವಾದ ತಿಳಿಸಿದ್ದ ಬಿಡುಗಡೆಗೊಂಡಿದ್ದ ಅಧಿಕಾರಿಗಳು

ಕತಾರ್‌ನಲ್ಲಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದ ಬೆನ್ನಲ್ಲೇ, ಈ ಪೈಕಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದರು.

ದೆಹಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೇಳೆ, ತಮ್ಮನ್ನು ಬಿಡುಗಡೆಗೊಳಿಸುವುದಕ್ಕೆ ರಾಜತಾಂತ್ರಿಕವಾಗಿ ಹಾಗೂ ವೈಯಕ್ತಿಕವಾಗಿಯೂ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದರು. ವಿಮಾನ ನಿಲ್ದಾಣದ ಆವರಣದಲ್ಲಿ ಖುಷಿಯಿಂದ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದರು.

ಏನಿದು ಪ್ರಕರಣ?
ಕತಾರ್‍‌ನ ಸಬ್‌ಮರೈನ್ ಯೋಜನೆಯ ಬಗ್ಗೆ ಇಸ್ರೇಲ್‌ಗೆ ಗೂಢಚರ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಎಂಟು ಮಂದಿ ನಿವೃತ್ತ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬಿರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಠ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಕರ್ ಪಕಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ಸೈಲರ್ ರಾಗೇಶ್ ಎಂಬುವವರನ್ನು 2022ರ ಅಕ್ಟೋಬರ್ ವೇಳೆ ಕತಾರ್‌ ನಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು.

ಇದು ದೊಡ್ಡ ಚರ್ಚೆಗೆ ಕಾರಣವಾದ ಕಾರಣವಾದ ಬೆನ್ನಲ್ಲೇ ಭಾರತ ಸರ್ಕಾರ ಮಧ್ಯಪ್ರವೇಶಿಸಿತ್ತು. ಆ ಬಳಿಕ ಕೊನೆಗೆ ಇದನ್ನು ಸುದೀರ್ಘ ಅವಧಿಯ ಜೈಲು ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X