ಅವಿಶ್ವಾಸ ನಿರ್ಣಯ | ಕೇಂದ್ರ ಸರ್ಕಾರಕ್ಕೆ ಗೆಲುವು; ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

Date:

ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೆಲುವು ಸಾಧಿಸಿದೆ.

ಧ್ವನಿಮತದ ಮೂಲಕ ನಡೆದ ಅವಿಶ್ವಾಸ ಮತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಿದೆ.

ಅವಿಶ್ವಾಸ ನಿರ್ಣಯ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2 ಗಂಟೆ 13 ನಿಮಿಷಗಳ ಕಾಲ ಮಾತನಾಡಿದರು.

ಚರ್ಚೆ ಶುರುವಾದ ಒಂದೂವರೆ ಗಂಟೆ ನಂತರ ವಿಪಕ್ಷಗಳು ಸಭಾತ್ಯಾಗ ಮಾಡಿದ ಸಂದರ್ಭದಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಕೆಲ ನಿಮಿಷ ಮಾತನಾಡಿದ ನರೇಂದ್ರ ಮೋದಿ, “ಮಣಿಪುರದಲ್ಲಿ ಹಿಂಸೆಯಾಗಿದೆ. ಮಹಿಳೆಯರ ಮೇಲೆ ಗಂಭೀರ ಅಪರಾಧವಾಗಿದೆ. ಅಪರಾಧಿಗಳಿಗೆ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ದೊಡ್ಡ ಪ್ರಯತ್ನ ಮಾಡುತ್ತಿದೆ. ದೇಶದ ನಾಗರೀಕರಿಗೆ ನಾನು ವಿಶ್ವಾಸದಿಂದ ಹೇಳುತ್ತಿದ್ದೇನೆ. ನಮ್ಮ ಪ್ರಯತ್ನ ಯಾವ ರೀತಿ ಸಾಗುತ್ತಿದೆ ಎಂದರೆ ಮಣಿಪುರದಲ್ಲಿ ಖಂಡಿತವಾಗಿ ಶಾಂತಿ ಮರಳುತ್ತದೆ. ಮಣಿಪುರದ ಜನರಿಗೂ ನಾನು ಇಲ್ಲಿಂದಲೇ ಮನವಿ ಮಾಡಲು ಹೇಳುತ್ತಿದ್ದೇನೆ. ಮಣಿಪುರದ ಜನರೊಂದಿಗೆ ಈ ದೇಶವಿದೆ. ಈ ಸದನ ಅವರೊಂದಿಗೆ ಇದೆ. ನಾವೆಲ್ಲರೂ ಸೇರಿಕೊಂಡು ಅಲ್ಲಿ ಪರಿಹಾರ ಹುಡುಕಬೇಕಿದೆ. ಮಣಿಪುರದ ಮತ್ತೆ ವಿಕಾಸದ ಗತಿಗೆ ಮರಳುತ್ತದೆ. ಅದರಲ್ಲಿ ಯಾವುದೇ ಅನುಮಾನ ಯಾರಿಗೂ ಬೇಡ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ಇದನ್ನು ಹೊರತುಪಡಿಸಿದರೆ ವಿಪಕ್ಷವನ್ನು ಟೀಕಿಸಲು ಮಣಿಪುರ ಹಾಗೂ ಈಶಾನ್ಯ ರಾಜ್ಯದ ವಿಷಯವನ್ನು ಆಗಾಗ ಪ್ರಸ್ತಾಪಿಸಿದರು. ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಬೇಕೆಂದು ಒತ್ತಾಯಿಸಿ ವಿಪಕ್ಷಗಳ ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಿತ್ತು.

ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

ಮಣಿಪುರ ಹಿಂಸಾಚಾರದ ಬಗ್ಗೆ ಹೆಚ್ಚು ಪ್ರಸ್ತಾಪಿಸದ ಪ್ರಧಾನಿ ನರೇಂದ್ರ ಮೋದಿ ಮನಸ್ಥಿತಿಯನ್ನು ಕಾಂಗ್ರೆಸ್ ಟೀಕಿಸಿದೆ.

ಪ್ರಶ್ನೆಗಳು ಈಗಲೂ ಹಾಗೆಯೇ ಉಳಿದಿವೆ ಎಂದಿರುವ ಕಾಂಗ್ರೆಸ್, ಮಣಿಪುರ ಹಿಂಸಾಚಾರ 100 ದಿನಗಳನ್ನು ಪೂರೈಸಿದೆ, ಪ್ರಧಾನಿ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ? ಮಣಿಪುರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಸುಮಾರು 80 ದಿನಗಳನ್ನು ಏಕೆ ತೆಗೆದುಕೊಂಡರು? ಪ್ರಧಾನಿ ಮೋದಿ ಅವರು ಮಣಿಪುರದ ಸಿಎಂ ಅನ್ನು ಇಲ್ಲಿಯವರೆಗೆ ಏಕೆ ವಜಾ ಮಾಡಿಲ್ಲ? ಎಂದು ಟ್ವಿಟರ್‌ನಲ್ಲಿ ತಿಳಿಸಿದೆ.

ಮಣಿಪುರಕ್ಕೆ ಸಂಬಂಧಿಸಿದ ವಿಪಕ್ಷಗಳ ಯಾವುದೇ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ. ಅದಕ್ಕಾಗಿಯೇ ‘ಇಂಡಿಯಾ’ ಮೈತ್ರಿಕೂಟವು ಮಣಿಪುರದ ಜನರಿಗೆ ತನ್ನ ಹೊಣೆಗಾರಿಕೆಯನ್ನು ಮನವರಿಕೆ ಮಾಡುವ ಸಲುವಾಗಿಯೇ ಸದನದಿಂದ ಹೊರನಡೆದಿದೆ ಎಂದು ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ...

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ...

ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಈ ವರ್ಷದ ನೀಟ್‌ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ...