ಕಾವೇರಿ ವಿವಾದ | ಪ್ರಧಾನಮಂತ್ರಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

Advertisements

“ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದೀಗ ಎರಡೂ ಪಕ್ಷಗಳು ಒಟ್ಟಾಗಿ ಸೇರಿವೆ. ನೀರು ಬಿಡದಂತೆ ನಮ್ಮ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ಮಾಡಬೇಕಿದೆ” ಎಂದರು.

“ಸರ್ಕಾರ ನಮ್ಮ ನಾಡಿನ ಜನರ ರಕ್ಷಣೆಗೆ ಮುಂದಾಗಬೇಕು. ಸುಪ್ರೀಂ ಕೋರ್ಟ್‌ಗೆ ಹೋಗುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಎರಡು ರಾಜ್ಯದ ಮುಖ್ಯಮಂತ್ರಿಗಳು ಸೇರಿ ಚರ್ಚೆ ನಡೆಸಬೇಕು. ನೀರು ಹಂಚಿಕೆ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಕಾವೇರಿ, ಮಹದಾಯಿ, ಹೇಮಾವತಿ ರಕ್ಷಣೆ ಹಾಗೂ ಎಲ್ಲ ಸಮಸ್ಯೆಗಳ ತಾರ್ಕಿಕ ಅಂತ್ಯಕ್ಕೆ ಬದ್ಧರಾಗಿದ್ದೇವೆ” ಎಂದು ತಿಳಿಸಿದರು.

Advertisements

“ಮೆಟ್ಟೂರು ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಪ್ರಸ್ತುತ 11 ಟಿಎಂಸಿ ನೀರು ಇರುವ ಬಗ್ಗೆ ಮಾಹಿತಿ ಇದೆ. ತಮಿಳುನಾಡಿನ ಮೆಟ್ಟೂರಿನಿಂದ 6500 ಕ್ಯೂಸೆಕ್ ಹೊರಹರಿವು ಇದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 10,000 ಕ್ಯೂಸೆಕ್ ನೀರು ಒಳಹರಿವು ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್​​ ಈ ವಿಚಾರಗಳನ್ನು ತಿರುಗಿಸುವ ಕೆಲಸ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ; ಸರ್ಕಾರ ಕ್ರಮ ವಿರೋಧಿಸಿ ಪ್ರತಿಭಟನೆ

“ಸೆ.29 ರಂದು ನಡೆಯುವ ಕರ್ನಾಟಕ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ದಸರಾ ಹಬ್ಬದ ಬಳಿಕ ಬಿಜೆಪಿ, ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

"ಹೋರಾಟದ ಮಾದರಿ ಬದಲಿಸೋಣ. ನಮ್ಮ ಕಷ್ಟ ಜನರಿಗೆ ಗೊತ್ತಾಗಲಿ. ಅಲೆಮಾರಿಗಳು ವಾಪಸ್‌...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X