ಬಿಜೆಪಿಗೆ ಈಗಲೂ ಕೇಜ್ರಿವಾಲ್ ಬಹಳ ಅಪಾಯಕಾರಿ: ಸಂಸದ ಸಂಜಯ್ ರಾವತ್

Date:

“ಪ್ರಧಾನಿ ನರೇಂದ್ರ ಮೋದಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಲೂ ಹೆದರುತ್ತಿದ್ದಾರೆ. ಏಕೆಂದರೆ ಕೇಜ್ರಿವಾಲ್‌ ಬಂಧನದ ನಂತರ ಕೂಡ ಹೆಚ್ಚು ಅಪಾಯಕಾರಿಯಾಗಿದ್ದಾರೆ” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ.

ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ವಶದಲ್ಲಿದ್ದುಕೊಂಡೇ ಸರ್ಕಾರವನ್ನು ನಡೆಸುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿರ್ಧಾರವನ್ನು ಬೆಂಬಲಿಸಿದ್ದು, ಕೇಜ್ರಿವಾಲ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದಾರೆ.

“ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿಗೆ ಹೋದ ನಾಯಕರು ಬಲಶಾಲಿಯಾಗಿದ್ದರು. ಅಂತೆಯೇ ಈಗ ಈಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್‌ ಅವರು, ಜೈಲಿನಿಂದಲೇ ಆಡಳಿತ ನಡೆಸಲು ಮುಂದಾಗಿರುವುದು ಶ್ಲಾಘನೀಯ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟವು ಪ್ರತಿಭಟನಾ ಮೆರವಣಿಗೆ ಆಯೋಜಿಸುತ್ತಿದೆ. ನಾವೆಲ್ಲರೂ ಆ ಮೆರವಣಿಗೆಯಲ್ಲಿ ಭಾಗವಹಿಸುತ್ತೇವೆ” ಎಂದು ಹೇಳಿದರು.

“ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಕಂಡರೆ ಭಯವಿದೆ. ಹಾಗಾಗಿ ಅವರನ್ನು ಬಂಧಿಸಿಟ್ಟಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ತನಗೆ ನೆಮ್ಮದಿ ಸಿಗಬಹುದೆಂದು ಮೋದಿ ಬಯಸಿದ್ದರು. ಆದರೆ, ಅರವಿಂದ್ ಕೇಜ್ರಿವಾಲ್ ಈಗ ಇನ್ನೂ ಹೆಚ್ಚು ಅಪಾಯಕಾರಿಯಾಗಿದ್ದಾರೆ. ಸಿಎಂ ಆಗಿದ್ದುಕೊಂಡೇ ಅವರು ಜೈಲಿನಿಂದಲೇ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ, ಜನರು ಅವರ ಮಾತನ್ನು ಕೇಳುತ್ತಾರೆ. ಜತೆಗೆ ಅವರ ಬೆಂಬಲಕ್ಕೆ ಬರುತ್ತಾರೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಂಧಿತರಾಗಿದ್ದ ನಾಯಕರು ಇದೇ ರೀತಿ ಕೆಲಸ ಮಾಡಿದ್ದರು. ಜೈಲಿನಿಂದ ಹೊರಬಂದಾಗ ಅವರು ಜನಬೆಂಬಲ ಪಡೆಯುವ ಮೂಲಕ ಇನ್ನಷ್ಟು ಬಲಶಾಲಿಯಾಗಿದ್ದರು” ಎಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹಾಡಿ, ಹೊಗಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲ; 20 ಸ್ಥಾನ ಗೆಲ್ತೇವೆ: ಸಿಎಂ ಸಿದ್ದರಾಮಯ್ಯ

ಸೀಟು ಹಂಚಿಕೆಯ ಬಗ್ಗೆ ಕೇಳಿದಾಗ, “ಶಿವಸೇನೆಯ ಉದ್ಧವ್ ಠಾಕ್ರೆ ಬಣದ 15 ರಿಂದ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗುವುದು” ಎಂದು ರಾವತ್ ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಮತ ಎಣಿಕೆ ವೇಳೆ ಈ ಅಂಶಗಳನ್ನು ತಪ್ಪದೆ ಪರಿಶೀಲಿಸಿ

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ...

ʼನಾವೆದ್ದು ನಿಲ್ಲದಿದ್ದರೆ- ಕರ್ನಾಟಕʼ ಸಂಘಟನೆಯಿಂದ ಹಾಸನ ಚಲೋಗೆ ಬೆಂಬಲ

‘ನಾವೆದ್ದು ನಿಲ್ಲದಿದ್ದರೆ’ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ಎಲ್ಲ ವಿಷಯಗಳ...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024...

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ...