‘RSS ವಿಶ್ವದ ಅತಿದೊಡ್ಡ ಎನ್‌ಜಿಒ’: 11 ವರ್ಷದಲ್ಲಿ ಮೊದಲ ಬಾರಿಗೆ RSS ಹೊಗಳಿದ ಮೋದಿ

Date:

Advertisements
ಕಳೆದ ಹನ್ನೊಂದು ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್‌ ಜಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಮೋದಿ ಕರೆದಿದ್ದಾರೆ!

ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಡುವಿನ ಆಂತರಿಕ ಬಿಕ್ಕಟ್ಟು ಆರಂಭವಾಗಿ ವರ್ಷ ಕಳೆದಿದೆ. ಸ್ಪಷ್ಟವಾಗಿ ಹೇಳುವುದಾದರೆ ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನಡುವಿನ ಭಿನ್ನಾಭಿಪ್ರಾಯ. ಎಲ್ಲಾ ವೈಮನಸ್ಸಿನ ನಡುವೆಯೇ ಕಳೆದ ಹನ್ನೊಂದು ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್‌ ಜಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಮೋದಿ ಕರೆದಿದ್ದಾರೆ!

ಆರ್‌ಎಸ್‌ಎಸ್ ಸ್ಥಾಪನೆಯಾಗಿ 100 ವರ್ಷಗಳು ಆಗುತ್ತಿರುವಾಗ ಪ್ರಧಾನಿ ಮೋದಿ ಆರ್‌ಎಸ್‌ಎಸ್‌ ಅನ್ನು ಶ್ಲಾಘಿಸಿದ್ದಾರೆ. ರಾಷ್ಟ್ರಕ್ಕೆ ಸಮರ್ಪಿತ ಸೇವೆ ಸಲ್ಲಿಸಿದ ಎಲ್ಲಾ ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ವಂದನೆ ಸಲ್ಲಿಸಿದ್ದಾರೆ. “ಇಂದು ನಾನು ಒಂದು ವಿಷಯವನ್ನು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ. 100 ವರ್ಷಗಳ ಹಿಂದೆ ಒಂದು ಸಂಘಟನೆ ಹುಟ್ಟಿತು, ಅದುವೇ ಆರ್‌ಎಸ್‌ಎಸ್‌. ಸಂಘದ 100 ವರ್ಷಗಳ ಸೇವೆಯು ಅದ್ಭುತವಾದುದ್ದು” ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಭಾಗವತ್, ಆರ್‌ಎಸ್‌ಎಸ್‌ ಜೊತೆ ಮೋದಿ ಇರುಸು-ಮುರುಸು: ಬಿಕ್ಕಟ್ಟಿನ ನಡುವೆ ಧನಕರ್ ರಾಜೀನಾಮೆ, ನಡೆದಿರುವುದೇನು?

Advertisements

ಹಾಗೆಯೇ ಕಳೆದ ನೂರು ವರ್ಷಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕರು ಮಾತೃಭೂಮಿಯ ಕಲ್ಯಾಣಕ್ಕಾಗಿ ವ್ಯಕ್ತಿ ನಿರ್ಮಾಣ ಮತ್ತು ರಾಷ್ಟ್ರ ನಿರ್ಮಾಣದ ಸಂಕಲ್ಪವನ್ನು ಪೂರೈಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಸೇವೆ, ಸಮರ್ಪಣೆ, ಸಂಘಟನೆ ಮತ್ತು ಅಪ್ರತಿಮ ಶಿಸ್ತು ಆರ್‌ಎಸ್‌ಎಸ್‌ನ ಗುರುತು. ಒಂದು ರೀತಿಯಲ್ಲಿ ಆರ್‌ಎಸ್‌ಎಸ್‌ ವಿಶ್ವದ ಅತಿದೊಡ್ಡ ಸರ್ಕಾರೇತರ ಸಂಸ್ಥೆ (ಎನ್‌ಜಿಒ)” ಎಂದೂ ಪ್ರಧಾನಿ ಹೇಳಿದ್ದಾರೆ.

ಹಲವು ವರ್ಷಗಳಿಂದ ಆರ್‌ಎಸ್‌ಎಸ್‌ನೊಂದಿಗೆ ವೈಮನಸ್ಸು ಕಟ್ಟಿಕೊಂಡು ಬಂದಿರುವ ಪ್ರಧಾನಿ ಮೋದಿ ತಮಗೆ 75 ವರ್ಷವಾಗುತ್ತಿರುವಾಗಲೇ ಆರ್‌ಎಸ್‌ಎಸ್‌ ಓಲೈಕೆಗೆ ಇಳಿದಿದ್ದಾರೆಯೇ? ಆರ್‌ಎಸ್‌ಎಸ್‌ ಮತ್ತು ಬಿಜೆಪಿಯಲ್ಲಿ 75 ವರ್ಷ ದಾಟಿದವರು ರಾಜಕೀಯದಿಂದ ನಿವೃತ್ತಿ ಪಡೆಯುವಂತೆ ಮಾಡಿದ್ದು, ಹಿರಿಯರನ್ನು ಮೂಲೆಗುಂಪು ಮಾಡಿದ್ದು ಮೋದಿ. ಎಲ್‌ ಕೆ ಅಡ್ವಾನಿ, ಜಸ್ವಂತ್ ಸಿಂಗ್, ಮುರಳಿ ಮನೋಹರ್ ಜೋಶಿ ಮೊದಲಾದವರಿಗೆ 75 ವರ್ಷ ದಾಟುತ್ತಿದ್ದಂತೆ ನಿವೃತ್ತಿಯ ಒತ್ತಡ ಹೇರಿದ ಪ್ರಧಾನಿ ಮೋದಿ ಈಗ ತಮಗೆ 75 ವರ್ಷವಾಗುತ್ತಿದ್ದಂತೆ ಇಕ್ಕಟ್ಟಿನಲ್ಲಿ ಸಿಲುಕಿರುವಂತಿದೆ.

ಈಗಾಗಲೇ ಬಿಜೆಪಿಯಲ್ಲಿ ನಿವೃತ್ತಿ ವಯಸ್ಸು 75 ಎಂದು ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಆಗಾಗ ಹೇಳುತ್ತಿದ್ದಾರೆ. ಇದು ಮಾತ್ರವಲ್ಲದೆ ಆರ್‌ಎಸ್‌ಎಸ್‌ಗೆ ವಿರುದ್ಧವಾದ ನಿರ್ಧಾರಗಳನ್ನು ಕೈಗೊಳ್ಳುವ, ಆರ್‌ಎಸ್‌ಎಸ್‌ ಅನ್ನು ಕಡೆಗಣಿಸುವ ವಿಚಾರದಲ್ಲಿ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್‌ ನಾಯಕರುಗಳ ನಡುವೆ ವೈಮನಸ್ಸಿದೆ. ಇದೇ ಕಾರಣದಿಂದಾಗಿ ಆರ್‌ಎಸ್‌ಎಸ್‌ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಪ್ರಚಾರ ನಡೆಸಿಲ್ಲ. ಇದೀಗ ತಾನೂ 75 ವರ್ಷ ಸಮೀಪಿಸುತ್ತಿರುವಂತೆಯೇ ಪ್ರಧಾನಿ ಮೋದಿ ಆರ್‌ಎಸ್‌ಎಸ್‌ ಜಪಕ್ಕೆ ಇಳಿದಿರುವಂತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X