ಕನ್ಯಾಕುಮಾರಿ| ವಿವೇಕಾನಂದ ಸ್ಮಾರಕದಲ್ಲಿ ಮೂರು ದಿನ ಪ್ರಧಾನಿ ಧ್ಯಾನ; 2 ಸಾವಿರ ಪೊಲೀಸ್ ಸಿಬ್ಬಂದಿಗಳ ಕಾವಲು!

Date:

ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದು ಭಾರೀ ಪೊಲೀಸ್ ಭದ್ರತೆ ಮಾಡಲಾಗಿದೆ. ಬರೋಬ್ಬರಿ ಎರಡು ಸಾವಿರ ಪೊಲೀಸ್ ಸಿಬ್ಬಂದಿಗಳು ಪ್ರಧಾನಿ ಧ್ಯಾನದ ವೇಳೆ ಕಾವಲು ಕಾಯಲಿದ್ದಾರೆ ಎಂದು ವರದಿಯಾಗಿದೆ.

2019ರ ಚುನಾವಣಾ ಪ್ರಚಾರದ ನಂತರ ಕೇದಾರನಾಥ ಗುಹೆಯಲ್ಲಿ ಧ್ಯಾನ ಕುಳಿತ ಪ್ರಧಾನಿ ಮೋದಿ ಈಗ ಐದು ವರ್ಷಗಳ ನಂತರ ಮತ್ತೆ ಧ್ಯಾನ ಕೂರಲಿದ್ದಾರೆ. ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗ ಪ್ರಧಾನಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್‌ನ ತಮಿಳುನಾಡು ಘಟಕ ಹೇಳಿದೆ. ಇದು ಪರೋಕ್ಷ ಪ್ರಚಾರದ ಭಾಗ ಎಂದು ಹೇಳಿದೆ.

ಮೇ 30ರಂದು ಲೋಕಸಭಾ ಚುನಾವಣಾ ಪ್ರಚಾರದ ಅಂತ್ಯದ ಬಳಿಕ ಪ್ರಧಾನಿ ಮೋದಿ ಸ್ವಾಮಿ ವಿವೇಕಾನಂದರ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಮೇ 30ರ ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಅವರು ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಪ್ರಧಾನಿ ಕನ್ಯಾಕುಮಾರಿ ಭೇಟಿಗೆ ತಮಿಳುನಾಡು ಕಾಂಗ್ರೆಸ್ ವಿರೋಧ

ಪ್ರಧಾನಿ ಮೋದಿ ಭೇಟಿ ಕಾರಣದಿಂದಾಗಿ ಕನ್ಯಾಕುಮಾರಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ತಿರುನಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ ಸುಂದರವತನಂ ಅವರೊಂದಿಗೆ ಕನ್ಯಾಕುಮಾರಿಯ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಪ್ರಧಾನಿಯವರ ಪ್ರಮುಖ ಭದ್ರತಾ ತಂಡವು ಸ್ಥಳಕ್ಕೆ ತಲುಪಿದ ನಂತರವೂ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಪ್ರಯೋಗವನ್ನು ನಡೆಸಲಾಗಿದೆ. ಕನ್ಯಾಕುಮಾರಿ ಮತ್ತು ಸುತ್ತಮುತ್ತ ಸುಮಾರು 2,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...