ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾವು ಸರಿಯಾಗಿ ಉತ್ತರ ನೀಡಬೇಕಿದೆ’ ಎಂದು ಬಿಜೆಪಿ ಸಚಿವರಿಗೆ ಸೂಚಿಸಿದ್ದಾರೆ.
ಜಿ20 ಸಮಿತಿಯ ಸಭೆಗೂ ಮುನ್ನ ಸಂಪುಟದ ಸಚಿವರೊಂದಿಗೆ ಸಮಾಲೋಚನೆ ಮಾಡಲು ಕರೆದಿದ್ದ ಸಭೆಯಲ್ಲಿ ನರೇಂದ್ರ ಮೋದಿ ಈ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಜೊತೆಗೆ, ಇಂಡಿಯಾ – ಭಾರತ ಕುರಿತ ಹೇಳಿಕೆಗಳನ್ನು ನೀಡದಂತೆ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರು, ‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕಿದೆ’ ಎಂದು ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮವು ಮಲೇರಿಯಾ, ಡೆಂಗ್ಯೂ ಮತ್ತು ಕೊರೊನಾ ವೈರಸ್‌ನಂತೆ ಕೆಲಸ ಮಾಡುತ್ತದೆ. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದನ್ನು ನಿರ್ಮೂಲನೆ ಮಾಡಬೇಕಿದೆ ಎಂದು ಕರೆ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? 2019ರ ಚುನಾವಣೆಗಾಗಿ ಕೇಂದ್ರಕ್ಕೆ 3 ಲಕ್ಷ ಕೋಟಿ ರೂ.ಹಣ ವರ್ಗಾವಣೆಗೆ ನಿರಾಕರಿಸಿದ್ದ ಆರ್‌ಬಿಐ
ಪ್ರಗತಿಪರರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಉದಯನಿಧಿ, ‘ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಮಲೇರಿಯಾ, ಸೊಳ್ಳೆ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದರಂತೆ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ತಿಳಿಸಿದ್ದರು.
ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬೆಂಬಲಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮನುಷ್ಯನ ಘಟನೆ ಹಾಗೂ ಸಮಾನತೆಯನ್ನು ಪ್ರತಿಪಾದಿಸದೇ ಇರುವುದು ಧರ್ಮವೇ ಅಲ್ಲ ಎಂದು ಹೇಳಿದ್ದಾರೆ.