ಪೊಕ್ಸೋ ಪ್ರಕರಣ | ಯಡಿಯೂರಪ್ಪಗೆ ಸಿಐಡಿ ನೋಟಿಸ್‌, ಅತ್ತ ಕೇಸ್ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್ ಮೊರೆ​

Date:

ಪೊಕ್ಸೋ ಪ್ರಕರಣದಡಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಮಾಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಕಾಯ್ದೆ ಅಡಿ ಯಡಿಯೂರಪ್ಪ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ರಾಜ್ಯ ಸರ್ಕಾರ ಪೊಕ್ಸೋ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕರಣ ದಾಖಲಾದ ಬಳಿಕ ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದರು. ಅಂದು ವಿಚಾರಣೆ ವೇಳೆ, ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು.‌

ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್ ಮೊರೆ​

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. “ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್​​​ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು” ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಗೃಹ ಸಚಿವ ಡಾ ಜಿ ಪರಮೇಶ್ವರ್‌ ಈ ಬಗ್ಗೆ ಪ್ರತಿಕ್ರಿಯಿಸಿ, “ತನಿಖೆ ನಡೆಯುತ್ತಿದೆ. ಸಿಐಡಿಯಿಂದ ತನಿಖೆಯು ಪ್ರಗತಿಯಲ್ಲಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ” ಎಂದು ಹೇಳಿದರು.

ಬಿಎಸ್‌ವೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಇತ್ತೀಚೆಗೆ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಅವರು ಬಳಲುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...