ಪೋಕ್ಸೋ ಪ್ರಕರಣ: ‘ಬಿಎಸ್‌ವೈ ಕೇಸ್‌ ರದ್ದು ಮಾಡಲ್ಲ’ ಎಂದ ಹೈಕೋರ್ಟ್‌

Date:

‘ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ’ ಎಂದು ಹೈಕೋರ್ಟ್‌ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣದ ತನಿಖೆ-ವಿಚಾರಣೆ ನಡೆಯಬೇಕು ಎಂದು ಹೇಳಿದೆ. ಅಲ್ಲದೆ, ನಿರೀಕ್ಷಣಾ ಜಾಮೀನು ನೀಡಿದ್ದು, ಬಂಧನದಿಂದ ಪಾರಾಗಲು ಅವಕಾಶ ಮಾಡಿಕೊಟ್ಟಿದೆ.

ಇನ್ನು, ವಿಚಾರಣೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ಸ್ಪಷ್ಟವಾಗಿಲ್ಲ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...