ಪೋಕ್ಸೊ ಪ್ರಕರಣ | ಯಡಿಯೂರಪ್ಪರನ್ನು ಬಂಧಿಸಬೇಕು ಎಂದು ನಾನು ಹೇಳಲು ಆಗುವುದಿಲ್ಲ: ಸಚಿವ ಪರಮೇಶ್ವರ್

Date:

Advertisements

ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ ಅಂತ ನಾನು ಹೇಳಲು ಆಗುವುದಿಲ್ಲ. ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಅವರು ಬಂಧಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ” ಎಂದರು.

“ಯಡಿಯೂರಪ್ಪ ಅವರು ಸ್ವಾಭಾವಿಕವಾಗಿ ತಮ್ಮನ್ನು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅದು ಅವರ ಕಾನೂನು ಹೋರಾಟ. ಅದಕ್ಕೆ ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಪ್ರತಿಕ್ರಿಯಿಸಿ, “ಹೈದರಾಬಾದ್‌ನಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X