ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

Date:

Advertisements

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ ಎಸ್‌ ಯಡಿಯೂರಪ್ಪ ಉತ್ತರಿಸಿದ್ದು, “ಜೂನ್ 17ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಸಕಾರಣಗಳಿಂದ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು” ಎಂದು ಕೋರಿದ್ದಾರೆ.

“ನಾನು ಕಳೆದ ಮಾರ್ಚ್ 28 ರಂದು ನೀಡಿದ್ದ ನೋಟಿಸ್ ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಬಂಧನಕ್ಕೆ ಪೊಲೀಸರು ಸಿದ್ಧತೆ

Advertisements

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ಬುಧವಾರ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪೊಲೀಸರು ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಬಹುದು.

ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪ ಅವರು ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ಪೋಕ್ಸೊ ಕಾಯ್ದೆಯಡಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಪೋಕ್ಸೊ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯ ಸಹೋದರ ಕೂಡ ಯಡಿಯೂರಪ್ಪ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ನಿರ್ದೇಶಿಸಲು ಕೋರ್ಟ್‌ ಮೊರೆ ಹೋಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X