ವಿಷ ವಿವಾದ | ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ ಎಂದ ಯತ್ನಾಳ್‌

Date:

  • ಯತ್ನಾಳ್‌ಗೆ ಮಾನಸಿಕ ಸ್ಥಿಮಿತ ಇಲ್ಲವೆಂದ ಉಗ್ರಪ್ಪ
  • ಬಿಜೆಪಿ ಪ್ರಚಾರ ಸಭೆಯಲ್ಲಿ ಯತ್ನಾಳ್ ಹೇಳಿಕೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿಷಕನ್ಯೆಗೆ ಹೋಲಿಸಿದ್ದಾರೆ.

- Advertisement -

ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಬಸನಗೌಡ ಪಾಟೀಲ್, ಸೋನಿಯಾ ಗಾಂಧಿ ಅವರನ್ನು ಚೀನಾ ಮತ್ತು ಪಾಕಿಸ್ತಾನದ ಎಜೆಂಟ್ ಎಂದು ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯೊಂದರಲ್ಲಿ ಪ್ರಧಾನಿ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿದ್ದರು. ಖರ್ಗೆ ಹೇಳಿಕೆ ಬೆನ್ನಲ್ಲೇ ಯತ್ನಾಳ್ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆಗೆ ಹೋಲಿಸಿದ್ದಾರೆ.

“ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ” ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿರುವ ಯತ್ನಾಳ್, “ಸಿದ್ದರಾಮಯ್ಯ ಲಿಂಗಾಯತರನ್ನು ಭ್ರಷ್ಟರು ಎನ್ನುತ್ತಾರೆ. ವೈಯಕ್ತಿಕವಾಗಿ ಅವರು ನಮ್ಮನ್ನು ಎಷ್ಟೇ ಬೈಯಲಿ. ಆದರೆ, ಇಡೀ ಸಮುದಾಯದ ಬಗ್ಗೆ ಮಾತನಾಡಬಾರದು” ಎಂದರು.

ಸೋನಿಯಾ ಗಾಂಧಿ ರಾಹುಲ್ ಗಾಂಧಿ ಅವರ ಕುರಿತ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿಎಸ್‌ ಉಗ್ರಪ್ಪ, “ಯತ್ನಾಳ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೆಣ್ಣನ್ನು ತಾಯಿ ಎಂದು ಗೌರವಿಸಬೇಕಾಗಿರುವುದು ಭಾರತದ ಸಂಸ್ಕೃತಿ. ಹೀಗಿರುವಾಗ ಒಬ್ಬ ತಾಯಿಗೆ ವಿಷಕನ್ಯೆ ಎಂದು ಕರೆಯಲು ನಾಚಿಕೆ ಆಗಬೇಕು” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಷ ವಿವಾದ | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

“ಯತ್ನಾಳ್‌ ಮಾತಿಗೆ ಹಿಡಿತವೇ ಇಲ್ಲ. ಒಬ್ಬ ಮನುಷ್ಯನ ಯೋಗ್ಯತೆ ಏನು ಎಂದು ಅವರ ಮಾತು ತೋರಿಸುತ್ತದೆ. ಇಂತವರನ್ನು ಒದ್ದು ಜೈಲಿಗೆ ಹಾಕಬೇಕು” ಎಂದು ಉಗ್ರಪ್ಪ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...

2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ...

ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ನಾಯಕರಾದ ಸೌರವ್, ರಾಂಕಾ, ಅಜಿಂಕ್ಯಗೆ 5 ದಿನ ನ್ಯಾಯಾಂಗ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ ಅನಧಿಕೃತವಾಗಿ ಪ್ರವೇಶಿಸಲು...