ಬಜೆಟ್ ಮಂಡನೆ ವೇಳೆ ಶಾಸಕಿಯ ಸೀಟಿನಲ್ಲಿ ಬಂದು ಕುಳಿತ ಹೊರಗಿನ ವ್ಯಕ್ತಿ : ಪೊಲೀಸ್ ವಶಕ್ಕೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಶಾಸಕಿಯೋರ್ವರ ಸೀಟಿನಲ್ಲಿ ವ್ಯಕ್ತಿಯೊಬ್ಬ ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಘಟನೆ ವರದಿಯಾಗಿದೆ.

- Advertisement -

ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು, ಸಿಎಂ ಐತಿಹಾಸಿಕ ಬಜೆಟ್ ಆರಂಭಿಸಿ ಕೆಲ ನಿಮಿಷಗಳ ನಂತರ ಖಾಸಗಿ ವ್ಯಕ್ತಿಯೋರ್ವ ಬಂದು ದೇವದುರ್ಗ ಶಾಸಕಿ ಕರೆಮ್ಮ ಜಾಗದಲ್ಲಿ ಕೂತಿದ್ದರು. ಬಳಿಕ ಅವರನ್ನು ಪ್ರಶ್ನಿಸಿದಾಗ ಮೊಳಕಾಲ್ಮೂರು ಶಾಸಕ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ವ್ಯಕ್ತಿಯ ಬಗ್ಗೆ ಅನುಮಾನ ಬಂದು ಪಕ್ಕದಲ್ಲಿದ್ದ ಕೆಲ ಶಾಸಕರಲ್ಲಿ ಕೇಳಿದಾಗ ಅವರು ನಮಗೆ ಗೊತ್ತಿಲ್ಲ ಅಂದರು. ಈ ನಡುವೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಳಿಗೂ ತೆರಳಿ ಕೈ ಕುಲುಕಿದರು. ಕೂಡಲೇ ಈ ವ್ಯಕ್ತಿಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದೆ. ಅಷ್ಟೊತ್ತಿಗೆ ಆತ ನಾಪತ್ತೆಯಾಗಿದ್ದ. ಸುಮಾರು 70ರ ಆಸುಪಾಸಿನ ವ್ಯಕ್ತಿ, ಕೈಯಲ್ಲೊಂದು ಸಣ್ಣ ಬ್ಯಾಗ್‌ ಕೂಡ ಇತ್ತು. ಇದು ಭದ್ರತಾ ವೈಫಲ್ಯವೋ ಏನೋ ನನಗೆ ಗೊತ್ತಿಲ್ಲ. ಕೂಡಲೇ ಸ್ಪೀಕರ್ ಗಮನಕ್ಕೂ ತಂದಿದ್ದೇನೆ ಎಂದು ತಿಳಿಸಿದ್ದಾರೆ.

arrested vidhana soudha

ಇದು ಮಾಧ್ಯಮಗಳಲ್ಲಿ ಸುದ್ದಿಯಾದ ಕೂಡಲೇ ಎಚ್ಚೆತ್ತುಕೊಂಡ ವಿಧಾನಸಭೆಯ ಪೊಲೀಸರು, ಸದನದ ಒಳಗಡೆ ಪ್ರವೇಶಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ವ್ಯಕ್ತಿಯನ್ನು ತಿಪ್ಪೆರುದ್ರಸ್ವಾಮಿ ಎಂದು ಗುರುತು ಹಿಡಿಯಲಾಗಿದೆ. ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾಕಾಗಿ ಒಳಪ್ರವೇಶಿಸಿದ್ದರು, ಅವರ ಹಿನ್ನೆಲೆ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ವಿಧಾನಸೌಧದ ಮಾರ್ಷಲ್‌ಗಳು ಈ ಬಗ್ಗೆ ದೂರು ಕೊಟ್ಟಿದ್ದಾರೆ. ಎಲ್ಲವನ್ನೂ ತನಿಖೆ ನಡೆಸುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...