ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುವಾಗ ‘ದಲಿತ’ ಪದ ಬಳಸಿದ ಆರೋಪದ ಮೇಲೆ ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕಂಕ್ವಲಿ ಶಾಸಕರಾದ ನಿತೇಶ್ ರಾಣೆ ಅವರು ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವನ್ನು ಯೂಟ್ಯೂಬ್‌ನಲ್ಲಿ ಕಳೆದ ವಾರ ಗಮನಿಸಿದ ವಕೀಲರೊಬ್ಬರು ಗಮನಿಸಿ ದೂರು ದಾಖಲಿಸಿದ್ದರು.
ಸಂದರ್ಶನದಲ್ಲಿ ಶಾಸಕರು ‘ದಲಿತ’ ಪದವನ್ನು ಬಳಸಿದ್ದಾರೆ. ಆದರೆ ಈ ಪದದ ಬಳಕೆಯನ್ನು ಕೇಂದ್ರ ಸರ್ಕಾರವು ಆಗಸ್ಟ್ 7, 2018 ರಂದು ನಿಷೇಧಿಸಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಗುಜರಾತ್ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಎಪಿ ಮೈತ್ರಿ
ಶಾಸಕರ ವಿರುದ್ಧ ಭಾತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಆಪಾದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕರವಾದ ಸಮರ್ಥನೆಗಳು) ಮತ್ತು 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವುದು) ಅಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಸಹ ದೂರಿನಲ್ಲಿ ದಾಖಲಿಸಲಾಗಿದೆ. ಪ್ರಕರಣವನ್ನು ನ್ಯಾಯಾಲಯದ ಆದೇಶದ ಮೇರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.