ತೇಜಸ್ವಿ ಯಾದವ್‌ಗೆ ಎರಡು ಮತದಾರರ ಗುರುತಿನ ಚೀಟಿ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

ಆರ್‌ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಎರಡು ಮತದಾರರ ಗುರುತಿನ ಚೀಟಿ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಹಾರದ ಪಟನಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಚುನಾವಣಾ ಆಯೋಗವು ಯಾದವ್ ಅವರಿಗೆ ‘ಅಧಿಕೃತವಾಗಿ ನೀಡಿಲ್ಲ’ ಎಂದು ಹೇಳಲಾದ ಮತದಾರರ ಗುರುತಿನ ಚೀಟಿಯನ್ನು ‘ತನಿಖೆಗೆ ಹಸ್ತಾಂತರಿಸುವಂತೆ’ ಯಾದವ್ ಅವರಿಗೆ ಚುನಾವಣಾ ಆಯೋಗ ತಿಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

- Advertisement -

ಇನ್ನು ವಿರೋಧ ಪಕ್ಷದ ನಾಯಕ ಯಾದವ್ ಅವರ ಎಪಿಕ್(EPIC) ಕಾರ್ಡ್ ಸಂಖ್ಯೆಯನ್ನು ಬದಲಾಯಿಸಲಾಗಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಎರಡು ಮತದಾರರ ಗುರುತಿನ ಚೀಟಿ ಸಂಬಂಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

“ನಾವು ದೂರನ್ನು ಜಿಲ್ಲಾ ಚುನಾವಣಾ ಕಚೇರಿಗೆ ರವಾನಿಸಿದ್ದೇವೆ. ಇಂತಹ ವಿಷಯಗಳ ಬಗ್ಗೆ ನಿರ್ಧರಿಸುವ ಅಧಿಕಾರವನ್ನ ಚುನಾವಣಾ ಕಚೇರಿ ಹೊಂದಿದೆ. ಚುನಾವಣಾ ಅಧಿಕಾರಿಗಳಿಂದ ನಿರ್ದೇಶನ ಬಂದರೆ ಎಫ್‌ಐಆರ್ ದಾಖಲಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಿದೆ. ಬಳಿಕ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಚುನಾವಣಾ ಆಯೋಗ ತಮ್ಮ EPIC ಸಂಖ್ಯೆಯನ್ನು ‘ಬದಲಾಯಿಸಿದೆ’ ಎಂದು ಯಾದವ್ ಆರೋಪಿಸಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (SIR) ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ಯಾದವ್ ಹೇಳಿದ್ದರು. ಆದರೆ ಈ ಆರೋಪವನ್ನು ಚುನಾವಣಾ ಆಯೋಗ ತಿರಸ್ಕರಿಸಿದ ಬಳಿಕ ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಯಾದವ್ ಅವರು ತಮ್ಮ ಅಫಿಡವಿಟ್‌ನಲ್ಲಿ ಹೇಳಿದಂತೆ EPIC ಸಂಖ್ಯೆ ಒಂದೇ ಆಗಿರುತ್ತದೆ ಎಂದು ಹೇಳುವ ಮೂಲಕ ಚುನಾವಣಾ ಆಯೋಗ ಈ ಆರೋಪವನ್ನು ತಿರಸ್ಕರಿಸಿದೆ.

ಇನ್ನು ಒಬ್ಬ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಎರಡು ಬಾರಿ ಕಾಣಿಸಿಕೊಂಡ ಕಾರಣ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಬೇಗುಸರಾಯ್ ಜಿಲ್ಲೆಯ ಬೂತ್ ಮಟ್ಟದ ಅಧಿಕಾರಿಯನ್ನು (BLO) ಅಮಾನತುಗೊಳಿಸಲಾಗಿದೆ. ಇನ್ನು ಈ ಘಟನೆ ಸಾಹೇಬ್‌ಪುರ್ ಕಮಲ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಈ ಕ್ಷೇತ್ರದಲ್ಲೇ ಎಸ್‌ಐಆರ್‌ನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ವರದಿ ಮಾಡಿದ್ದ ಪತ್ರಕರ್ತರೊಬ್ಬರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...