ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂನ್ 10ರವರೆಗೆ ವಿಸ್ತರಣೆ

Date:

ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ.

- Advertisement -

ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ, ಆರೋಪಿ ಪ್ರಜ್ವಲ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್‌ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್ ಪುರಸ್ಕರಿಸಿದರು.

ಆರೋಪಿ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಹಾಜರಿದ್ದರು. ಮೇ 31ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಪ್ರಜ್ವಲ್‌ರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಅಂದು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಿ ಜೂನ್‌ 6ವರೆಗೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದಿದ್ದರು.

ಪ್ರಜ್ವಲ್‌ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅವುಗಳ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376, 506, 505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್‌), 506, 354ಎ(1)(ii), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ವಿಧಾನ ಪರಿಷತ್ ಚುನಾವಣೆ | ಮೇಲ್ಮನೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಇದಲ್ಲದೇ, ಬೆಂಗಳೂರಿನ ಸಿಐಡಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್)‌, 376(2)(ಕೆ), 506, 354ಎ(1)(ii), 354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತ್ಯ ಬರೆದ ಪತ್ರಕರ್ತನ ಹತ್ಯೆ, ಮಗನ ಒಂಟಿ ಹೋರಾಟ: ಪೆರೋಲ್ ಮೋಜಿನಲ್ಲಿ ಅತ್ಯಾಚಾರಿ ರಾಮ್ ರಹೀಮ್

ಸಾಧ್ವಿಗಳ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ...

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ...

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು...