ದಬ್ಬಾಳಿಕೆ ಮುಂದುವರಿದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇ ಪದೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇ ರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.

- Advertisement -

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಪೊಲೀಸರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ವಿನಾಕಾರಣ ಎಫ್‍ಐಆರ್ ದಾಖಲಿಸುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಖುಷಿಪಡಿಸಲು ಅಧಿಕಾರಿಗಳ ಈ ನಡವಳಿಕೆ ಅಕ್ಷಮ್ಯ ಅಪರಾಧ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ತಪ್ಪು ಮಾಡಿದ ಅಧಿಕಾರಿಗಳಿಗೆ ತಿಳಿಹೇಳುವ ಕೆಲಸವನ್ನು ಮಾಡಿ. ನಿನ್ನೆ ನಡೆದ ಘಟನೆ ಸಣ್ಣ ಘಟನೆಯಲ್ಲ. ವಿನಾಕಾರಣ ನಮ್ಮ ಕಾರ್ಯಕರ್ತೆಯನ್ನು ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿವರೆಗೆ ಕೂರಿಸಿದ್ದು ಒಪ್ಪುವ ನಡೆಯಲ್ಲ. ಜನರಿಗೆ ನ್ಯಾಯ ಕೊಡಬೇಕಾದ ಪೊಲೀಸರು ಹೀಗೆ ಮಾಡುವುದು ಸರಿಯೇ” ಎಂದು ಪ್ರಶ್ನಿಸಿದರು.

“ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿನ್ನೆ ನಮ್ಮ ಬಿಜೆಪಿಯ ಕಾರ್ಯಕರ್ತೆ ಛಾಯಾ ಅವರು ಸದಸ್ಯತ್ವ ಅಭಿಯಾನ ಮಾಡುವ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಪೊಲೀಸರು ಆ ಹೆಣ್ಮಗಳನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಪೊಲೀಸ್ ಠಾಣೆಗೆ ಧಾವಿಸಿ ಹೋಗಿ ಕಾರಣ ಕೇಳಿದ್ದಾರೆ. ಆಗ ಒಟಿಪಿಗಳನ್ನು ಡೌನ್‍ಲೋಡ್ ಮಾಡುತ್ತಿದ್ದಾರೆಂದು ಏನೇನೋ ಕಥೆ ಹೇಳಿಕೊಂಡು ಆ ಹೆಣ್ಮಗಳನ್ನು ರಾತ್ರಿ 12ರವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...