ಕಾಂಗ್ರೆಸ್‌ 135 ಸ್ಥಾನ ಗೆದ್ದರೂ ಅಭದ್ರತೆ, ‘ಆಪರೇಷನ್ ಹಸ್ತ’ ನಡೆಸುವ ಸಾಧ್ಯತೆ: ಸಿ.ಟಿ ರವಿ

Date:

ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನಗಳ ಬಹುಮತದೊಂದಿಗೆ ಗೆದ್ದರೂ ಕಾಂಗ್ರೆಸ್‌ನಲ್ಲಿ ಅಭದ್ರತೆ ಕಾಡುತ್ತಿದೆ. ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷದ ಶಾಸಕರನ್ನು ಸೆಳೆಯಲು ‘ಆಪರೇಷನ್ ಹಸ್ತ’ ಆರಂಭಿಸಲು ಮುಂದಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ.

- Advertisement -

ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜಿಲ್ಲಾವಾರು ಶಾಸಕರ ಸಭೆ, ಸಚಿವರ ಮಟ್ಟದ ಸಭೆ ನಡೆಸಿ ಕುಂದುಕೊರತೆ ಆಲಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರ ಆರು ತಿಂಗಳ ನಂತರ ಪತನವಾಗಬಹುದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಆಪರೇಷನ್‌ ಹಸ್ತ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ನಡುವೆ, ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಗರೇ ನನ್ನನ್ನು ಕಳುಹಿಸಬಹುದು ಎಂದು ಎಸ್‌.ಟಿ ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಬಿಜೆಪಿ ಶಾಸಕ ಟಿ.ಎಸ್‌ ಶ್ರೀವತ್ಸ ಕೂಡ ಕಾಂಗ್ರೆಸ್‌ ಸೇರಬಹುದು ಎಂದು ಸುದ್ದಿಯಾಗಿತ್ತು. ಆದರೆ, ತಾವು ಪಕ್ಷ ತೊರೆಯುವುದಿಲ್ಲ ಎಂದು ಶ್ರೀವತ್ಸ ಹೇಳಿದ್ದಾರೆ.

ಅಲ್ಲದೆ, ಮುಡಾ ಮಾಜಿ ಅಧ್ಯಕ್ಷ, ಶಾಸಕ ಎಚ್‌.ವಿ ರಾಜೀವ್ ಕೂಡ ಪಕ್ಷ ಬಿಡುವುದಿಲ್ಲ ಎಂದು ಶ್ರೀವತ್ಸ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...