ಪಿಎಸ್ಐ ಪರೀಕ್ಷೆ ಮುಂದೂಡಿಕೆ | ಕೆಇಎ, ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ: ಪರಮೇಶ್ವರ್

Date:

Advertisements

ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವ‌ತ್ಥನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ‌ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗಧಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು” ಎಂದರು.

Advertisements

“ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು‌ ಹೇಗೆ” ಎಂದು ಪ್ರಶ್ನಿಸಿದರು.

“ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ” ಎಂದು ತಿಳಿಸಿದರು.

“ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಾಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ” ಎಂದು ಹೇಳಿದರು‌.

“ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ” ಎಂದು ತಿಳಿಸಿದರು.

ಭಾಸ್ಕರ್ ರಾವ್‌ಗೆ ತಿರುಗೇಟು

“ಭಾಸ್ಕರ್ ರಾವ್ ಹೇಳಿಕೆಗೆ ಪ್ರತಿಕ್ರಿಯಿಸುವುದು ಅಷ್ಟು ಸಮಂಜಸವಲ್ಲ. ಅವರು ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದವರು. ಆಗ ಸಿಸಿಬಿ ಇತ್ತಲ್ಲವೇ. ಆಗ ಭಾಸ್ಕರ್ ರಾವ್ ವಸೂಲಿ ಮಾಡಲು ಇಟ್ಟಿಕೊಂಡಿದ್ದರೆ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X