ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು: ಸಿಎಂ ಸಿದ್ದರಾಮಯ್ಯ

Date:

Advertisements
  • ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟಿಸಿದ ಸಿಎಂ
  • ಸಂವಿಧಾನದ ವಿರುದ್ಧದ ಅಪಪ್ರಚಾರ ಸಹಿಸಬಾರದು: ಮುಖ್ಯಮಂತ್ರಿ ಕರೆ
  • ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿದ್ದರಾಮಯ್ಯ

ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು” ಎಂದರು.

Advertisements

“1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ” ಎಂದು ಹೇಳಿದರು.

“ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ವಿರುದ್ಧ ʼರಾಷ್ಟ್ರೀಯ ಭದ್ರತಾ ಕಾಯ್ದೆʼ ಅಸ್ತ್ರ ಪ್ರಯೋಗ; ಪ್ರಜಾಪ್ರಭುತ್ವದ ಅಣಕ

“ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ. ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು” ಎಂದರು.

“ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಶ್ರೇಷ್ಠ ಸಂವಿಧಾನ

“ಸಂವಿಧಾನವನ್ನು ಓದುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಅಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ , ಸಚಿವ ಪ್ರಿಯಾಂಕ ಖರ್ಗೆ ಶಾಸಕ ಸೋಮಶೇಖರ್,ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X