ಕಾಂಗ್ರೆಸ್​ನವರು ಸುಳ್ಳು ಹೇಳುವವರು: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಲ್ಹಾದ್‌ ಜೋಶಿ ವಾಗ್ದಾಳಿ

Date:

ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದರು.

- Advertisement -

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಎಕ್ಸ್​ಪೋಸ್ ಆಗುತ್ತಿದೆ. ಉಚಿತ ವಿದ್ಯುತ್ ಎಂದರು, ಈಗ ವಿದ್ಯುತ್ ದರ ಹೆಚ್ಚಳವಾಗಿದೆ. ಕಾಕಾಸಾಹೇಬ್ ಪಾಟೀಲ್​, ಮಹದೇವಪ್ಪ ನಿನಗೂ ಫ್ರೀ ಅಂದರು. ಹಾಲು, ಪೆಟ್ರೋಲ್, ಡಿಸೇಲ್​ಗೆ ಸೆಸ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಆಸ್ತಿ ನೋಂದಣಿ​ ದರ ಹೆಚ್ಚಳವಾಗಿದೆ. ಮದ್ಯದ ದರ ಹೆಚ್ಚಳವಾಗಿದೆ. ಈಗ ಸರ್ಕಾರ ಬಸ್​ ಟಿಕೆಟ್ ದರ ಕೂಡ ಹೆಚ್ಚಳ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲು ಹೊರಟಿದ್ದಾರೆ. ಅಧಿಕಾರಕ್ಕಾಗಿ ಯಾವ ಕೀಳುಮಟ್ಟಕ್ಕೂ ಇಳಿಯಲು ಕಾಂಗ್ರೆಸ್​​ನವರು ಹಿಂದೆ ಸರಿಯಲ್ಲ. ಕಾಂಗ್ರೆಸ್​ನವರು ಬರೀ ಸುಳ್ಳು ಹೇಳುತ್ತಾರೆ, ನಿರ್ಲಜ್ಜರು ಎಂದು ವಾಗ್ದಾಳಿ ನಡೆಸಿದರು.

ಸಾರಿಗೆ ಸಂಸ್ಥೆ 2,000 ಕೋಟಿ ರೂಪಾಯಿ ಸಾಲ ಮಾಡುವ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲ. ಸಿದ್ದರಾಮಯ್ಯ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಕೆಎಸ್ಆರ್​ಟಿಸಿ ಬಸ್ ದರವನ್ನು ಶೇಕಡ 15ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಈ ಮಧ್ಯೆ, ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿಗೆ ಉಚಿತ ಉಚಿತ ಎಂದುಕೊಂಡು, ಗಂಡಸರ ಜೇಬಿಗೆ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸ್ವೇಚ್ಛಾಚಾರದ ಆಡಳಿತ: ಹೆಚ್‌ಡಿಕೆ

ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಕೇಂದ್ರ ಸಚಿವ ಹೆಚ್​ ​ಡಿ ಕುಮಾರಸ್ವಾಮಿ, ಬೆಲೆ ಏರಿಕೆಗೆ ಸಿದ್ಧರಾಗಿ ಎಂಬ ಬಗ್ಗೆ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಜನರು ಕೂಡ ಅಷ್ಟೇ, ಒಂದೆರಡು ದಿನ ವಿರೋಧ ವ್ಯಕ್ತಪಡಿಸಿ ಮರೆತುಬಿಡುತ್ತಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆ ಎಂಬುದೇ ಅನಿಸುತ್ತಿಲ್ಲ. ಸ್ವೇಚ್ಛಾಚಾರವಾಗಿ ಆಡಳಿತ ನಡೆಯುತ್ತಿದೆ. ಹೇಳೋರು ಕೇಳೋರು ಯಾರು ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...