ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ | ಏಕಾಏಕಿ ಯಾರನ್ನೂ ಬಂಧಿಸಲು ಆಗುವುದಿಲ್ಲ: ಸಚಿವ ಪರಮೇಶ್ವರ್‌

Date:

Advertisements

ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ ಪ್ರಕರಣದಲ್ಲಿ ಯಾರನ್ನೇ ಆದರೂ ಏಕಾಏಕಿ ಬಂಧಿಸಲು ಆಗುವುದಿಲ್ಲ. ಅದಕ್ಕೆ ಪುರಾವೆಗಳು ಬೇಕು. ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಪ್ರಜ್ವಲ್ ಮತ್ತು ರೇವಣ್ಣನ ಲೈಂಗಿಕ ಹಗರಣ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಹೆಚ್ ​ಡಿ ರೇವಣ್ಣರನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಅಮಿತ್‌ ಶಾ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದರು.

“ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ. ಅಪರಾಧ ದಂಡಸಂಹಿತೆಯ ಸೆಕ್ಷನ್ 41a ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ” ಎಂದರು.

Advertisements

“ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಬಹಳ ಜನರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ” ಎಂದರು.

“ಹೆಚ್ ​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವಣ ಆರೋಪ ಪ್ರತ್ಯಾರೋಪಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬಹಳ ಜನ ಅದರ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ. ಅದಕ್ಕೆಲ್ಲ ನಾನು ಉತ್ತರ ಕೊಡಲು ಸಾಧ್ಯವಿಲ್ಲ. ತನಿಖಾ ವರದಿ ಬಂದ ಮೇಲೆ ಏನು ಸತ್ಯಾಸತ್ಯತೆ ಇದೆ ಎಂಬುದರ ಮೇಲೆ ಕ್ರಮ ಆಗುತ್ತದೆ‌” ಎಂದು ಹೇಳಿದರು.

“ಎಸ್​​ಐಟಿ ಈಗಾಗಲೇ ನೊಟೀಸ್ ಜಾರಿ ಮಾಡಿದೆ. ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆ ಎಲ್ಲ ಮಾಹಿತಿ ಇದೆ. ವಾಪಸ್ ಕರೆದುಕೊಂಡು ಬರಲು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಎಸ್​ಐಟಿ ಮಾಡಲಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಕಾರವೂ ಬೇಕಾಗಬಹುದು ಅಥವಾ ಎಸ್​ಐಟಿ ತಂಡದವರೇ ಕರೆದುಕೊಂಡು ಬರಬಹುದು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X