ಪ್ರಜ್ವಲ್‌ ಪ್ರಕರಣ | 10 ಪೆನ್​​ಡ್ರೈವ್‌, ಹಾರ್ಡ್ ಡಿಸ್ಕ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಎಸ್‌ಐಟಿ

Date:

Advertisements

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ‌ (ಎಸ್‌ಐಟಿ) ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್​​ಡ್ರೈವ್‌ ಮತ್ತು ಹಾರ್ಡ್ ಡಿಸ್ಕ್ ವಶಪಡಿಸಿಕೊಂಡಿದೆ.

ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್​ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್​ಡ್ರೈವ್​ಗಳನ್ನು ಎಸ್​ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ.

ಪ್ರೀತಂ ಗೌಡ ಆಪ್ತರ ಮನೆಯಲ್ಲಿ ದೊರೆತ ಪೆನ್​​ಡ್ರೈವ್ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಇಲ್ಲವೋ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಸತ್ಯ ತಿಳಿಯಬೇಕಿದೆ.

Advertisements

7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ಎಸ್‌ಐಟಿ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್‌ ಡಿಸ್ಕ್​​ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದ್ದು, ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್​​ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಅನುಮಾನವಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಮೊದಲ ಐವರು ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಕಾಂಗ್ರೆಸ್ ಕಾರ್ಯಕರ್ತರೆಂದು ಗುರುತಿಸಲಾಗಿರುವ ನವೀನ್ ಗೌಡ, ಪುಟ್ಟಿ ಆಲಿಯಾಸ್ ಪುಟ್ಟರಾಜ್​​ರನ್ನು ಈವರೆಗೂ ಎಸ್​ಐಟಿ ಬಂಧಿಸಿಲ್ಲ. ಪೆನ್ ಡ್ರೈವ್ ಹೊಂದಿದ್ದ ಮೂಲ ವ್ಯಕ್ತಿ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ ನನ್ನೂ ತನಿಖಾ ತಂಡ ವಶಕ್ಕೆ ಪಡೆದಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X