ಪ್ರಜ್ವಲ್‌ ಪ್ರಕರಣ | ಮೊಬೈಲ್ ಮಾನದಂಡದಲ್ಲಿ ತನಿಖೆ ಮಾಡಿದರೆ 15 ಲಕ್ಷ ಬಳಕೆದಾರರೂ ತಪ್ಪಿತಸ್ಥರಾಗುತ್ತಾರೆ: ಪ್ರೀತಂ ಗೌಡ

Date:

ಪೆನ್​ ಡ್ರೈವ್ ಪ್ರಕರಣದಲ್ಲಿ ಬಂಧನ ಆಗಿರುವ ಆರೋಪಿಗಳು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

- Advertisement -

ಹಾಸನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ಕಚೇರಿಯಲ್ಲಿ 40-50ಕ್ಕಿಂತ ಹೆಚ್ಚು ಜನ ಕೆಲಸ ಮಾಡುತ್ತಾರೆ. ಒಬ್ಬ ಪೆನ್ ​ಡ್ರೈವ್​ನಲ್ಲಿ ಹಾಕಿ ನೋಡಿದರೆ ಅಪರಾಧ ಅಂದರೆ ಹೇಗೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಾಸನದಲ್ಲಿ 2 ಲಕ್ಷ ಮೊಬೈಲ್ ಇದ್ದರೆ ಎಲ್ಲ ಮೊಬೈಲ್​ನಲ್ಲೂ ಇರುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಯಾಕೆಂದರೆ ಯಾರು ಬೇಕು ಅಂತಾ ತರಿಸಿಕೊಂಡಿರುವುದಿಲ್ಲ. ಎಸ್​ಐಟಿ ಇದೇ ಮಾನದಂಡದಲ್ಲಿ ತನಿಖೆ ಮಾಡುತ್ತದೆ ಅಂತಾದರೆ ಜಿಲ್ಲೆಯಲ್ಲಿ 15 ಲಕ್ಷ ಮೊಬೈಲ್ ಬಳಕೆದಾರರು ತಪ್ಪಿತಸ್ಥರಾಗುತ್ತಾರೆ” ಎಂದರು.

“ನಮ್ಮ ಕಚೇರಿಯಲ್ಲಿ ಸಂಬಳಕ್ಕೆ ಕೆಲಸ ಮಾಡುವವರು ಇದ್ದಾರೆ. ವಾಲಂಟರಿಯಾಗಿ ಕೆಲಸ ಮಾಡುವವರೂ ಇದ್ದಾರೆ. ಏಪ್ರಿಲ್ 23ರಂದು ಲಾಯರ್ ಪೆನ್ ಡ್ರೈವ್ ತಂದು ಕೊಟ್ಟಿದ್ದಾರೆ. ಹಾಗಂತ ಲಾಯರ್ ಮೇಲೆ ಕೇಸ್ ದಾಖಲಿಸಲು ಆಗುತ್ತಾ? ನಾನು ಯಾರಿಗೂ ವಕ್ತಾರ ಆಗಲು ರೆಡಿ ಇಲ್ಲ. ಸಂತ್ರಸ್ತರ ವಿಡಿಯೋ ಹರಿಬಿಡಬಾರದು ಎಂಬುದು ನನ್ನ ನಿಲುವು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್‌ ಪೆನ್‌ ಡ್ರೈವ್ ಪ್ರಕರಣ | ಎಸ್‌ಐಟಿ ಬಲೆಗೆ ಬೀಳುತ್ತಿರುವ ಬಿಜೆಪಿ ನಾಯಕರ ಆಪ್ತರು

“ತನಿಖೆ ನಡೆಯುತ್ತಿರುವಾಗ ಆರೋಪಿಗಳ ಬಗ್ಗೆ ಮಾತಾಡುವುದು ಸರಿಯಲ್ಲ. ಯಾರು ಏನು ಮಾಡಿದ್ದಾರೆ ಅಂತಾ ತನಿಖೆ ಮೂಲಕ ಗೊತ್ತಾಗುತ್ತದೆ. ಯಾವುದೇ ಕಾರಣಕ್ಕೂ ಅಶ್ಲೀಲ ವೀಡಿಯೋಗಳನ್ನು ಇಟ್ಟುಕೊಳ್ಳಬೇಡಿ. ಫಾರ್ವರ್ಡ್ ಮಾಡಬೇಡಿ ಅಂತಾ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...